HEALTH TIPS

‌ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತ ಖಾತೆಯಿಂದ ಕರೆ ಸ್ವೀಕರಿಸುವ ಮುನ್ನ ಎಚ್ಚರ!

 ಗುರುಗ್ರಾಮ: ಇನ್‌ಸ್ಟಾಗ್ರಾಮ್‌ನಲ್ಲಿ ಅಪರಿಚಿತ ಖಾತೆಯಿಂದ ಬಂದ ವಿಡಿಯೊ ಕರೆಯನ್ನು ಸ್ವೀಕರಿಸಿದ ಯುವಕನೊಬ್ಬ ಬರೋಬ್ಬರಿ ₹1.20 ಲಕ್ಷ ಕಳೆದುಕೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆರೋಪಿಗಳು ಇನ್‌ಸ್ಟಾಗ್ರಾಮ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿ ಯುವಕನೊಂದಿಗೆ ಅಶ್ಲೀಲ ವಿಡಿಯೊ ಕರೆ ಮಾಡಿ, 10 ರಿಂದ 15 ಸೆಕೆಂಡ್ ಕರೆಯನ್ನು ರೆಕಾರ್ಡ್‌ ಮಾಡಿಕೊಂಡಿದ್ದಾರೆ.

ಬಳಿಕ ಆ ವಿಡಿಯೊವನ್ನು ಸ್ನೇಹಿತರು ಹಾಗೂ ಕುಟುಂಬಸ್ಥರಿಗೆ ಕಳುಹಿಸಿ ಮಾನಹಾನಿ ಮಾಡುವುದಾಗಿ ಯುವಕನಿಗೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪರಿಚಿತರು ಪದೇ ಪದೇ ನನಗೆ ಬೆದರಿಕೆ ಹಾಕಿ ವಿವಿಧ ಹಂತಗಳಲ್ಲಿ ಸುಮಾರು ₹1.20 ಲಕ್ಷವನ್ನು ದೋಚಿದ್ದಾರೆ ಎಂದು ಗುರುಗ್ರಾಮ ನಿವಾಸಿ ಹರೀಶ್ ಹೇಳಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳನ್ನು ಶೀಘ್ರವಾಗಿ ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries