ಜೈಪುರ: ರಾಜಸ್ಥಾನ ಮತ್ತು ಮಧ್ಯಪ್ರದೇಶದ ಹಲವು ರೈಲು ನಿಲ್ದಾಣಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಅಂಚೆ ಮೂಲಕ ಬೆದರಿಕೆ ಪತ್ರವನ್ನು ರವಾನಿಸಲಾಗಿದೆ. ಈ ಕುರಿತು ಹನುಮಾನ್‌ಗಢ ರೈಲು ನಿಲ್ದಾಣದ ಸ್ವೇಷನ್ ಮಾಸ್ಟರ್‌ವೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ಯಾರೆ ಲಾಲ್ ಮೀನಾ ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 30ರಂದು ಗಂಗಾನಗರ, ಹನುಮಾನ್‌ಗಢ, ಜೋಧ್‌ಪುರ, ಬಿಕಾನೇರ್, ಕೋಟಾ, ಬುಂಡಿ, ಉದಯಪುರ, ಜೈಪುರದ ರೈಲ್ವೆ ನಿಲ್ದಾಣ ಮತ್ತು ಇತರೆ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಈ ಪತ್ರ ಜೈಷ್ -ಎ-ಮೊಹಮ್ಮದ್ ಹೆಸರಿನಲ್ಲಿದೆ ಎಂದು ಮೀನಾ ತಿಳಿಸಿದ್ದಾರೆ.
ನವೆಂಬರ್ 2ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದೂ ಮೀನಾ ಹೇಳಿದ್ದಾರೆ.