ವಾಷಿಂಗ್ಟನ್: ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದ ತನಿಖೆಗೆ ಭಾರತವು ಕೆನಡಾಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಅಮೆರಿಕ ಆರೋಪಿಸಿದೆ.
ನಿಜ್ಜರ್ ಪ್ರಕರಣ | ಕೆನಡಾಕ್ಕೆ ಭಾರತ ಸಹಕಾರ ನೀಡುತ್ತಿಲ್ಲ: ಅಮೆರಿಕ
0
ಅಕ್ಟೋಬರ್ 17, 2024
Tags
ವಾಷಿಂಗ್ಟನ್: ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದ ತನಿಖೆಗೆ ಭಾರತವು ಕೆನಡಾಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಅಮೆರಿಕ ಆರೋಪಿಸಿದೆ.
'ಕೆನಡಾ ಮಾಡಿರುವ ಆರೋಪಗಳು ಗಂಭೀರವಾಗಿವೆ. ಹಾಗಾಗಿ ಭಾರತ ಇದನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ತನಿಖೆಗೆ ಸಹಕಾರ ನೀಡಬೇಕು ಎಂಬುದಾಗಿ ನಾವು ಬಯಸುತ್ತೇವೆ' ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ತಿಳಿಸಿದ್ದಾರೆ.
ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೊ ಅವರು ಆರೋಪಿಸಿದ ಬೆನ್ನಲ್ಲೇ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.
ಕೆನಡಾದ ಆರೋಪಗಳನ್ನು ನಿರಾಕರಿಸಿರುವ ಭಾರತ, ಕೆನಡಾದಲ್ಲಿದ್ದ ಭಾರತದ ಹೈಕಮೀಷನರ್ ಅನ್ನು ವಾಪಸ್ ಕರೆಸಿಕೊಂಡಿದೆ. ಅದಕ್ಕೆ ಪ್ರತಿಯಾಗಿ ಕೆನಡಾ ಸರ್ಕಾರ, ಭಾರತದ ಆರು ಮಂದಿ ರಾಜತಾಂತ್ರಿಕ ಅಧಿಕಾರಿಗಳಿಗೆ ದೇಶ ತೊರೆಯುವಂತೆ ಸೂಚಿಸಿತ್ತು. ಇದರ ಬೆನ್ನಲ್ಲೇ ಭಾರತ ಕೂಡ ಕೆನಡಾದ ಆರು ಮಂದಿ ರಾಜತಾಂತ್ರಿಕ ಅಧಿಕಾರಿಗಳಿಗೆ ದೇಶ ತೊರೆಯುವಂತೆ ಸೂಚಿಸಿದೆ.
'ಭಾರತ-ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧದ ಬಗ್ಗೆ ನಾವು ಪ್ರತಿಕ್ರಿಯೆ ನೀಡಲ್ಲ. ಆದರೆ, ಈ ಹಿಂದೆ ಹೇಳಿದಂತೆ ಕೆನಡಾ ಮಾಡಿರುವ ಆರೋಪಗಳನ್ನು ಭಾರತ ಗಂಭೀರವಾಗಿ ಪರಿಗಣಿಸಬೇಕು' ಎಂದು ಮಿಲ್ಲರ್ ಹೇಳಿದ್ದಾರೆ.