ಕಾಸರಗಗೋಡು: ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ವತಿಯಿಂದ ವರ್ಣೋತ್ಸವ ಕಾರ್ಯಕ್ರಮ ಹೊಸದುರ್ಗ ಸರ್ಕಾರಿ ಹೈಯರ್‍ಸೆಕೆಂಡರಿ ಶಾಲೆಯಲ್ಲಿ ಜರುಗೊತು. ಮಕ್ಕಳ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಞಂಗಾಡು ನಗರಸಭಾ ಅಧ್ಯಕ್ಷೆ ಕೆ.ವಿ.ಸುಜಾತಾ ಸಮಾರಂಭ ಉದ್ಘಾಟಿಸಿದರು. ಓ.ಎಂ.ಬಾಲಕೃಷ್ಣನ್ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಉಪಾಧ್ಯಕ್ಷ ಅಬ್ದುಲ್ಲ ಬಿಲ್ಟೆಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರಭಾವತಿ ಕೆ. ಅಶೋಕನ್, ಶಾಲಾ ಪಿಟಿಎ ಅಧ್ಯಕ್ಷ ಕೆ.ಪಿ. ಮೋಹನನ್, ಎಂ.ವಿ.ನಾರಾಯಣನ್ ಮತ್ತು ಸತೀಶನ್ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಕಾರ್ಯದರ್ಶಿ ಟಿ.ಎಂ.ಎ. ಕರೀಂ ಸ್ವಾಗತಿಸಿದರು. ಸಿ.ವಿ.ಗಿರೀಶನ್ ವಂದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಿಗೆ ನ. 14 ರಂದು ವಿದ್ಯಾನಗರ ಸನ್‍ರೈಸ್ ಪಾರ್ಕ್‍ನಲ್ಲಿ ನಡೆಯಲಿರುವ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಬಹುಮಾನ ವಿತರಿಸುವರು.