HEALTH TIPS

ಜನಗಣತಿ ನಡೆಸಲು ಮೋದಿ ಸರ್ಕಾರದಿಂದ ವಿಳಂಬ ನೀತಿ ಅನುಸರಣೆ: ಕಾಂಗ್ರೆಸ್ ಕಿಡಿ

Top Post Ad

Click to join Samarasasudhi Official Whatsapp Group

Qries

 ವದೆಹಲಿ: ಜನಗಣತಿ ನಡೆಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದು ಏಕೆ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಜನಗಣತಿ ಮೂಲಕವೇ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ಸ್ಥಾಪಿಸಲು ಸಾಧ್ಯ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ಹೇಳಿದ್ದಾರೆ.

'ಆರ್ಥಿಕ ಪ್ರಕ್ಷುಬ್ಧತೆ ಮತ್ತು ರಾಜಕೀಯ ಬದಲಾವಣೆ ನಡುವೆಯೂ ಶ್ರೀಲಂಕಾ ಇತ್ತೀಚೆಗೆ ಜನಸಂಖ್ಯೆ ಮತ್ತು ವಸತಿ ಗಣತಿ ಘೋಷಿಸಿದೆ. ಆದರೆ ಭಾರತದಲ್ಲಿ ಇನ್ನೂ ವಿಳಂಬ ನೀತಿಯನ್ನು ಅನುಸರಿಸುತ್ತಿದೆ' ಎಂದು ರಮೇಶ್‌ ಕುಟುಕಿದ್ದಾರೆ.

'2021ರಲ್ಲಿಯೇ ದಶವಾರ್ಷಿಕ ಜನಗಣತಿ ನಡೆಯಬೇಕಿತ್ತು, ಆದರೆ ಇದುವರೆಗೂ ನಡೆದಿಲ್ಲ ಮತ್ತು ಜಾತಿಗಣತಿ ನಡೆಸುವ ಯಾವುದೇ ಸುಳಿವು ಸಿಗುತ್ತಿಲ್ಲ. 10 ಕೋಟಿಗೂ ಅಧಿಕ ಭಾರತೀಯರು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ 2013 ಅಥವಾ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಸಿಗಬೇಕಾದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ' ಎಂದು ರಮೇಶ್‌ 'ಎಕ್ಸ್‌'ನಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂಬಂಧಿಸಿದಂತೆ 1951ರಿಂದ ಪ್ರತಿ ಹತ್ತು ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತಿದೆ. ಆದರೆ ಉಳಿದ ಹಿಂದುಳಿದ ವರ್ಗ ಮತ್ತು ಇತರೆ ವರ್ಗಗಳ ಸಂಬಂಧ ಜನಗತಿ ನಡೆದಿಲ್ಲ ಎಂದು ರಮೇಶ್ ತಿಳಿಸಿದ್ದಾರೆ

ಜನಗಣತಿಯಲ್ಲಿ ಜಾತಿ ಸಂಬಂಧಿತ ವಿಷಯಗಳನ್ನು ಸೇರಿಸುವ ಬಗ್ಗೆ ಕಾಂಗ್ರೆಸ್‌ ಸೇರಿದಂತೆ ಇತರೆ ಎಲ್ಲಾ ರಾಜಕೀಯ ಪಕ್ಷ‌ಗಳ ಒತ್ತಾಯಿಸಿದರೂ ಈವರೆಗೂ ಉತ್ತರವೇ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries