HEALTH TIPS

ಪೂರ್ವ ಲಡಾಖ್‌: ಭಾರತ, ಚೀನಾ ಸೇನೆ ವಾಪಸ್ ಪ್ರಕ್ರಿಯೆ ಶುರು

         ವದೆಹಲಿ: ಪೂರ್ವ ಲಡಾಖ್‌ನ ಡೆಪ್ಸಾಂಗ್ ಮತ್ತು ಡೆಮ್‌ಚೋಕ್ ಪ್ರದೇಶಗಳಲ್ಲಿ ನಿಯೋಜಿಸಿರುವ ತಮ್ಮ ಸೇನೆಗಳನ್ನು ವಾಪಸ್‌ ಕರೆಸಿಕೊಳ್ಳುವ ಪ್ರಕ್ರಿಯೆಯನ್ನು ಭಾರತ ಹಾಗೂ ಚೀನಾ ಆರಂಭಿಸಿವೆ.

           ಅಕ್ಟೋಬರ್‌ 28-29ರ ಒಳಗಾಗಿ ಈ ಪ್ರಕ್ರಿಯೆ ಪೂರ್ಣಗೊಳ್ಳಬಹುದು ಎಂದು ಸೇನೆಯ ಮೂಲಗಳು ಶುಕ್ರವಾರ ತಿಳಿಸಿವೆ.

         ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಬಳಿ ಗಸ್ತು ನಡೆಸುವ ಮತ್ತು ಸೇನೆಯ ವಾಪಸಾತಿ ಸಂಬಂಧ ಉಭಯ ದೇಶಗಳ ನಡುವೆ ಒಪ್ಪಂದ ಏರ್ಪಟ್ಟ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಪೂರ್ವ ಲಡಾಖ್‌ ಬಳಿ ನಾಲ್ಕು ವರ್ಷಗಳಿಂದ ಮೂಡಿರುವ ಅನಿಶ್ಚಿತ ಪರಿಸ್ಥಿತಿಯನ್ನು ಅಂತ್ಯಗೊಳಿಸುವಲ್ಲಿ ಇದೊಂದು ಪ್ರಮುಖ ಹೆಜ್ಜೆ ಎಂದು ವಿಶ್ಲೇಷಿಸಲಾಗಿದೆ.

         ಸೇನೆಗಳ ವಾಪಸಾತಿ ಪೂರ್ಣಗೊಂಡ ನಂತರ ಈ ಎರಡೂ ಪ್ರದೇಶಗಳಲ್ಲಿ ಭಾರತ ಮತ್ತು ಚೀನಾ ಪಹರೆ ಕಾಯುವ ಕೆಲಸ ಆರಂಭಿಸಲಿವೆ. ಅದೇ ರೀತಿ, ಎಲ್‌ಎಸಿಯ ಎರಡೂ ಕಡೆಗಳಲ್ಲಿ ನಿರ್ಮಿಸಿರುವ ತಾತ್ಕಾಲಿಕ ಶೆಡ್‌ಗಳು ಮತ್ತು ಟೆಂಟ್‌ಗಳನ್ನು ಕೆಡವಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಈ ಭಾಗದಲ್ಲಿ ಗಸ್ತು ನಡೆಸುವ ಪ್ರಕ್ರಿಯೆಯು ಅಂತಿಮವಾಗಿ, 2020ರ ಏಪ್ರಿಲ್‌ಗಿಂತ ಮುನ್ನ ಇದ್ದ ಸ್ಥಿತಿಗೆ ಮರಳುವ ವಿಶ್ವಾಸ ಮೂಡಿದೆ.

             ಎರಡೂ ದೇಶಗಳ ನಡುವೆ ಗಡಿ ಪಹರೆಗೆ ಸಂಬಂಧಿಸಿದ ಒಪ್ಪಂದವನ್ನು ಮೊದಲು ರಾಜತಾಂತ್ರಿಕ ಮಟ್ಟದಲ್ಲಿ ಅಂತಿಮಗೊಳಿಸಲಾಗಿದ್ದು, ಆ ಬಳಿಕ ಮಿಲಿಟರಿ ಹಂತದ ಮಾತುಕತೆಗಳು ನಡೆದವು ಎಂದು ಮೂಲಗಳು ತಿಳಿಸಿವೆ. ಕಮಾಂಡರ್‌ ಮಟ್ಟದ ಮಾತುಕತೆಯ ಬಳಿಕ ಒಪ್ಪಂದವನ್ನು ಕಾರ್ಯರೂಪಕ್ಕಿಳಿಸುವ ಪ್ರಕ್ರಿಯೆ ಆರಂಭವಾಗಿದೆ.

             2020ರ ಜೂನ್‌ನಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದಿದ್ದ ಘರ್ಷಣೆಯ ನಂತರ ಎರಡೂ ರಾಷ್ಟ್ರಗಳ ನಡುವೆ ಬಿಕ್ಕಟ್ಟು ಉಲ್ಬಣಿಸಿತ್ತು. ಪೂರ್ವ ಲಡಾಖ್‌ನ ಎಲ್‌ಎಸಿ ಉದ್ದಕ್ಕೂ ಗಸ್ತು ತಿರುಗುವ ಕುರಿತು ಭಾರತ ಮತ್ತು ಚೀನಾ ಒಪ್ಪಂದಕ್ಕೆ ಬಂದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅ.21ರಂದು ಹೇಳಿದ್ದರು. ಮರುದಿನ ಚೀನಾ ಇದನ್ನು ದೃಢಪಡಿಸಿತ್ತು.

             ಕಜಾನ್‌ನಲ್ಲಿ ನಡೆದ ಬ್ರಿಕ್ಸ್‌ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರು ಲಡಾಖ್‌ನ ಗಡಿ ವಿವಾದ ಪರಿಹರಿಸುವುದಕ್ಕೆ ಸಂಬಂಧಿಸಿದ ಒಪ್ಪಂದವನ್ನು ಅನುಮೋದಿಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries