ಮುಂಬೈ: ಮಾಜಿ ಸಚಿವ, ಎನ್‌ಸಿಪಿ (ಅಜಿತ್ ಪವಾರ್ ಬಣ) ಮುಖಂಡ ಬಾಬಾ ಸಿದ್ದಿಕಿ ಅವರ ಮನೆಗೆ ಇಂದು (ಭಾನುವಾರ) ಭೇಟಿ ನೀಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಮುಂಬೈ: ಮಾಜಿ ಸಚಿವ, ಎನ್‌ಸಿಪಿ (ಅಜಿತ್ ಪವಾರ್ ಬಣ) ಮುಖಂಡ ಬಾಬಾ ಸಿದ್ದಿಕಿ ಅವರ ಮನೆಗೆ ಇಂದು (ಭಾನುವಾರ) ಭೇಟಿ ನೀಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಬಿಗಿ ಭದ್ರತೆಯಲ್ಲಿ ಬಾಬಾ ಸಿದ್ದಿಕಿ ಮನೆಗೆ ಸಲ್ಮಾನ್ ಖಾನ್ ಭೇಟಿ ನೀಡಿದ್ದಾರೆ.
ಮುಂಬೈನ ಬಾಂದ್ರಾದಲ್ಲಿ 66 ವರ್ಷದ ಬಾಬಾ ಸಿದ್ದಿಕಿ ಅವರನ್ನು ಶನಿವಾರ ಮೂವರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ಆಪ್ತ ಸ್ನೇಹಿತ, ನಟ ಸಲ್ಮಾನ್ ಖಾನ್ ಸೇರಿದಂತೆ ಬಾಲಿವುಡ್‌ನ ಅನೇಕ ನಟರೊಂದಿಗೆ ಬಾಬಾ ಸಿದ್ದಿಕಿ ಉತ್ತಮ ಒಡನಾಟವನ್ನು ಹೊಂದಿದ್ದರು.
ಭಾನುವಾರ ರಾತ್ರಿ ಘಟನೆಗೆ ತಿಳಿದ ಕೂಡಲೇ ಆಸ್ಪತ್ರೆಗೆ ತೆರಳಿ ಸಿದ್ದಿಕಿ ಕುಟುಂಬದವರನ್ನು ಸಲ್ಮಾನ್ ಖಾನ್ ಭೇಟಿಯಾಗಿದ್ದರು.