ಮುಂಬೈ: ಮಹಾರಾಷ್ಟ್ರದ ರತ್ನಗಿರಿ ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥ ಸಂಚಲನ ನಡೆಯುತ್ತಿದ್ದ ವೇಳೆ ಅಲ್ಪಸಂಖ್ಯಾತರು ಘೋಷಣೆ ಕೂಗಿದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮುಂಬೈ: ಮಹಾರಾಷ್ಟ್ರದ ರತ್ನಗಿರಿ ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥ ಸಂಚಲನ ನಡೆಯುತ್ತಿದ್ದ ವೇಳೆ ಅಲ್ಪಸಂಖ್ಯಾತರು ಘೋಷಣೆ ಕೂಗಿದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
'ಕೊಂಕಣ್ ನಗರ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
'ಪಥಸಂಚಲನದ ವೇಳೆ ವಿರುದ್ಧವಾದ ಘೋಷಣೆಗಳನ್ನು ಕೂಗುವ ಮೂಲಕ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಲಾಗಿದೆ ಎಂದು ಆರೋಪಿಸಿ ಸಂಘಟನೆಯವರು ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ' ಎಂದು ಮಾಹಿತಿ ನೀಡಿದ್ದಾರೆ.
'ಯಾವುದೇ ರೀತಿಯ ಹಿಂಸಾಚಾರ ನಡೆದಿಲ್ಲ, ಆದರೆ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧದ ಪ್ರಾಥಮಿಕ ವರದಿಯನ್ನು ನೀಡಬೇಕು ಎಂದು ಆಗ್ರಹಿಸಿ ಹಲವರು ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸಿದ್ದಾರೆ' ಎಂದು ತಿಳಿಸಿದ್ದಾರೆ.