ನವದೆಹಲಿ: 'ಉಕ್ಕಿನ ಮನುಷ್ಯ ಎಂದೇ ಬಿರುದಾಂಕಿತರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ (ಅ. 29) ಸಂದರ್ಭದಲ್ಲಿ ಆಯೋಜಿಸಲಾಗುತ್ತಿರುವ 'ಏಕತೆಗಾಗಿ ಓಟ'ದಲ್ಲಿ ಸಂಸದರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಬೇಕು' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.

ಸಾಮಾಜಿಕ ಮಾಧ್ಯಮಗಳಲ್ಲಿ #Sardar150 ಹ್ಯಾಷ್‌ಟ್ಯಾಗ್ ಬಳಸಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆಲೋಚನೆಗಳು ಮತ್ತು ಕೊಡುಗೆಗಳನ್ನು ಜನರಿಗೆ ಹೆಚ್ಚಾಗಿ ಪ್ರಚಾರ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಹೇಳಿದ್ದಾರೆ.
'ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸುವ ಈ ಕಾರ್ಯಕ್ರಮದಲ್ಲಿ ಆರೋಗ್ಯ ಕಾಪಾಡಿಕೊಂಡು ಸದೃಢರಾಗಿರುವ ನಿಟ್ಟಿನಲ್ಲಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲೇಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಬೇಕು' ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.
'ಸಾರ್ವಜನಿಕರು, ಬಿಜೆಪಿ ಸಂಸದರು, ಶಾಸಕರು, ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸರ್ದಾರ್ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ದೇಶದಲ್ಲಿ ಏಕತೆ ಹಾಗೂ ಸಮಗ್ರತೆಯನ್ನು ಸ್ಥಾಪಿಸಿದ ಸರ್ದಾರ್ ಪಟೇಲ್ ಅವರ ಅಸಾಧಾರಣ ಕಾರ್ಯವು ಪ್ರತಿಯೊಬ್ಬರಿಗೂ ಸ್ಫೂರ್ತಿಯ ಮೂಲವಾಗಿದೆ. ಅದನ್ನು ಪ್ರತಿಯೊಬ್ಬರಿಗೂ ತಿಳಿಸುವ ಕೆಸಲವನ್ನು ಮಾಡಬೇಕು' ಎಂದು ನಡ್ಡಾ ಹೇಳಿದ್ದಾರೆ.