ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಸ್ತ್ರೋತ್ಸವವು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಳಿಯೂರಿನಲ್ಲಿ ನಡೆಯಲಿರುವುದು. ಇದರ ಆಮಂತ್ರಣ ಪತ್ರಿಕೆಯನ್ನು ವರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾರತಿ ಬಿಡುಗಡೆಗೊಳಿಸಿದರು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸೀತಾರಾಮ ಬೇರಿಂಜ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ರಾಜಗೋಪಾಲ ಕೆ, ವಾಣಿ ವಿಜಯ ಫ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಕೃಷ್ಣವೇಣಿ, ಮನಾವಾಟಿ ಬೀವಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಮುಸಾ ಕಳಾಯಿ, ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಪತಿ ರಾವ್, ರಾಧಾಕೃಷ್ಣ ಹೊಳ್ಳ, ಎಂ.ಪಿ.ಟಿ.ಎ ಅಧ್ಯಕ್ಷೆ ಸೀತಾಲಕ್ಷ್ಮೀ ಹಾಗೂ ಪಿ.ಟಿ.ಎ. ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪುಷ್ಪಾವತಿ ಸ್ವಾಗತಿಸಿ, ರೆನಿಟಾ ಡಿಸೋಜ ವಂದಿಸಿದರು.