ಕಾಸರಗೋಡು: ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಮುನ್ನಡೆಸಿಕೊಂಡು ಬಂದಿದ್ದ ಎಂ.ಎನ್.ವಿ.ಜಿ. ಅಡಿಯೋಡಿ ಸಂಸ್ಮರಣಾ ಸಮಾರಂಬ ವಿದ್ಯಾನಗರ ಸಿವಿಲ್ ಸ್ಟೇಷನ್ ವಠಾರದಲ್ಲಿ ಜರುಗಿತು ಜಾಯಿಂಟ್ ಕೌನ್ಸಿಲ್ ಜಿಲ್ಲಾಧ್ಯಕ್ಷ ಇ.ಮನೋಜ್ ಕುಮಾರ್ ಸಮಾರಂಭ ಉದ್ಘಾಟಿಸಿದರು. ಸಂಘಟನೆ ಪ್ರಾದೇಶಿಕ ಸಮಿತಿ ಅಧ್ಯಕ್ಷೆ ನಿಶಾ ಪಿ.ವಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ನೌಕರರು ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ರಾಜ್ಯ ಪರಿಷತ್ ಸದಸ್ಯ ಎಸ್.ಪ್ರಸಾದ್ ಕರುವಾಳಂ ಸಂಸ್ಮರಣಾ ಉಪನ್ಯಾಸ ನೀಡಿದರು. ರಾಜ್ಯ ಪರಿಷತ್ ಸದಸ್ಯರಾದ ಬಾನಂ ದಿವಾಕರನ್, ಜಿ ಸುರೇಶ್ ಬಾಬು ಪ್ರೀತಾ ಕೆ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ರಮೇಶ್ ಕೆ.ಟಿ ಸ್ವಾಗತಿಸಿದರು.