ಕರಾಚಿ: ಪಾಕಿಸ್ತಾನದ ಕರಾಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊರವಲಯದಲ್ಲಿ ಭಾನುವಾರ ತಡರಾತ್ರಿ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಚೀನಾ ಪ್ರಜೆಗಳು ಮೃತಪಟ್ಟಿದ್ದಾರೆ. ದಾಳಿಯ ಹೊಣೆಯನ್ನು ಬಲೂಚ್ ಲಿಬರೇಶನ್ ಆರ್ಮಿ(ಬಿಎಲ್‌ಎ) ಹೊತ್ತುಕೊಂಡಿದೆ.

ಬಲೂಚಿಸ್ತಾನ ಪ್ರತ್ಯೇಕತಾವಾದಿ ಸಂಘಟನೆಯಾಗಿರುವ ಬಿಎಲ್‌ಎ, ಚೀನಾ ಪ್ರಜೆಗಳನ್ನು ಗುರಿಯಾಗಿಸಿ ಆತ್ಮಾಹುತಿ ದಾಳಿ ನಡೆಸಿರುವುದಾಗಿ ಸೋಮವಾರ ತಿಳಿಸಿದೆ.
ಮೃತರು ಚೀನಾದ ಸಹಕಾರದೊಂದಿಗೆ ಪಾಕಿಸ್ತಾನ ಆರಂಭಿಸಿರುವ ಪೋರ್ಟ್ ಕಾಸಿಂ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಚೀನಾ ರಾಯಭಾರ ಕಚೇರಿ ತಿಳಿಸಿದೆ. ಚೀನಾ ಮುಂದಾಳತ್ವದ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯು ಪಾಕಿಸ್ತಾನದಲ್ಲಿ ಇದೇ 15 ಮತ್ತು 16ರಂದು ನಡೆಯಲಿದೆ.