ತಿರುಪತಿ: ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ 9 ದಿನಗಳ ಬ್ರಹ್ಮೋತ್ಸವವು ಶುಕ್ರವಾರದಿಂದ ಆರಂಭವಾಗಲಿದೆ.
ತಿರುಪತಿ: ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ 9 ದಿನಗಳ ಬ್ರಹ್ಮೋತ್ಸವವು ಶುಕ್ರವಾರದಿಂದ ಆರಂಭವಾಗಲಿದೆ.
ಬ್ರಹ್ಮೋತ್ಸವವ ಅ.4ರಿಂದ 12ರವರೆಗೆ ನಡೆಯಲಿದ್ದು, ಈ ವೇಳೆ ದೇವಸ್ಥಾನಕ್ಕೆ ಪ್ರತಿ ದಿನ 2 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಜೆ. ಶ್ಯಾಮಲ ರಾವ್, 'ಭಕ್ತರಿಗಾಗಿ 7 ಲಕ್ಷ ಲಾಡುಗಳನ್ನು ಈಗಾಗಲೇ ತಯಾರಿಸಲಾಗಿದೆ' ಎಂದರು.
ಅಲ್ಲದೇ 'ಭಕ್ತರ ನೆರವಿಗಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸ ಲಾಗುವುದು. 11.5 ಲಕ್ಷ ಜನರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಸುಮಾರು 45,000 ಭಕ್ತರಿಗೆ ತಿರುಮಲದಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ' ಎಂದು ಮಾಹಿತಿ ನೀಡಿದರು.