ನವದೆಹಲಿ: ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಆತಿಶಿ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.
' ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಲಾಯಿತು.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರು, ಸೆಪ್ಟೆಂಬರ್ 13ರಂದು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದರು. ಬಳಿಕ ಅಚ್ಚರಿ ಎನ್ನುವಂತೆ ಸಿಎಂ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿ ರಾಜೀನಾಮೆ ನೀಡಿದ್ದರು.
ಬಳಿಕ ನಡೆದ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಆತಿಶಿ ಅವರ ಹೆಸರನ್ನು ಕೇಜ್ರಿವಾಲ್ ಘೋಷಿಸಿದ್ದರು. ನಿರ್ಗಮಿತ ಸಿಎಂ ನಿರ್ಧಾರವನ್ನು ಎಎಪಿಯು ಸರ್ವಾನುಮತದಿಂದ ಅಂಗೀಕರಿಸಿತ್ತು.