ಕಾಸರಗೋಡು: ಸನಾತನ ಧರ್ಮದ ಜೀವ ಸತ್ವವನ್ನು ಮುಂದಿನ ಭವಿಷ್ಯವಾದ ಮಕ್ಕಳಿಗೆ ದಾಟಿಸುವ ಕೆಲಸವಾಗಬೇಕು. ಆ ಕೆಲಸ ಮನೆಯಿಂದಲೇ ಆರಂಭವಾಗಬೇಕು. ಪ್ರಕೃತಿಯ ಪ್ರತಿಯೊಂದು ಕಣಕಣದಲ್ಲೂ ಅಗೋಚರ ಶಕ್ತಿಯಿದೆ. ಈ ಹಿನ್ನೆಲೆಯಲ್ಲಿ ಪ್ರಕೃತಿಯನ್ನು ಸಂರಕ್ಷಿಸಿ ಆರಾಧಿಸಬೇಕಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಮುಖ್ಯ ಸಚೇತಕ ಕ್ಯಾ.ಗಣೇಶ ಕಾರ್ಣಿಕ್ ಹೇಳಿದರು.
ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾಸರಗೋಡು ದಸರಾ ಸಾಂಸ್ಕøತಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀ ಕ್ಷೇತ್ರದ ಪಾತ್ರಿಗಳಾದ ಪಾಂಗೋಡು ಪ್ರವೀಣ ನಾಯಕ್ ದೀಪ ಪ್ರಜ್ವಲನೆ ಮಾಡಿ ಚಾಲನೆ ನೀಡಿದರು. ಕಾಸರಗೋಡಿನ ಮಲ್ಲಿಕಾರ್ಜುನ ಕ್ಷೇತ್ರದ ಆಡಳಿತ ಸಮಿತಿಯ ಸದಸ್ಯ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸಿದರು. ಕಸಾಪ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಧಾರ್ಮಿಕ ಮುಖಂಡರಾದ ಅರಿಬೈಲ್ ಗೋಪಾಲ ಶೆಟ್ಟಿ, ಧಾರ್ಮಿಕ ಮುಂದಾಳು, ಉದ್ಯಮಿ ಶ್ರೀಧರ ಶೆಟ್ಟಿ ಮುಟ್ಟಂ, ಶಿಕ್ಷಣ ತಜ್ಞ ವಿಶಾಲಾಕ್ಷ ಪುತ್ರಕಳ, ಪತ್ರಕರ್ತ ಗಂಗಾಧರ ತೆಕ್ಕೇಮೂಲೆ, ಪಿ.ಕೆ.ಜಗನ್ನಾಥ ಶೆಟ್ಟಿ, ಜಯ ಮಣಿಯಂಪಾರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಂಧ್ಯಾರಾಣಿ ಟೀಚರ್ ಉಪಸ್ಥಿತರಿದ್ದರು. ಸಂಕೀರ್ತನಾ ಸಾಮ್ರಾಟ್ ಜಯಾನಂದ ಕುಮಾರ್ ಹೊಸದುರ್ಗ ಅವರ ಸಾರಥ್ಯದಲ್ಲಿ 11ನೇ ವರ್ಷದ ದಸರಾ ಸಂಕೀರ್ತನಾ ದಶಾಹ ಉದ್ಘಾಟಿಸಲಾಯಿತು. ಧಾರ್ಮಿಕ ಮುಂದಾಳು ಸವಿತಾ ಟೀಚರ್ ಶುಭಾಶಂಸನೆಗೈದರು. ನುಳ್ಳಿಪ್ಪಾಡಿಯ ಕನ್ನಡ ಭÀವನ ಗ್ರಂಥಾಲಯ ಸ್ಥಾಪಕ ಅಧ್ಯಕ್ಷ ವಾಮನ್ ರಾವ್ ಬೇಕಲ್ ಪ್ರಾಸ್ತಾವಿಕ ನುಡಿದು ಸ್ವಾಗತಿಸಿದರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ವಸಂತ ಕೆರೆಮನೆ ವಂದಿಸಿದರು.