ವಾರಾಣಸಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ರಾಜ್ಯದ ಎಲ್ಲ ಸಂಸ್ಕೃತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಯೋಜನೆಗೆ ಚಾಲನೆ ನೀಡಿದರು.
ವಾರಾಣಸಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ರಾಜ್ಯದ ಎಲ್ಲ ಸಂಸ್ಕೃತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಯೋಜನೆಗೆ ಚಾಲನೆ ನೀಡಿದರು.
ಇಲ್ಲಿನ ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಯೋಜನೆಗೆ ಚಾಲನೆ ನೀಡಿದ ಅವರು, ರಾಜ್ಯದಲ್ಲಿ ಗುರುಕುಲ ಶೈಲಿಯ ಸಂಸ್ಕೃತ ಶಾಲೆಗಳನ್ನು ಪುನರುಜ್ಜೀವನಗೊಳಿಸುವ ಯೋಜನೆಯನ್ನು ಘೋಷಿಸಿದರು ಎಂದು ಹೇಳಿಕೆಯೊಂದು ತಿಳಿಸಿದೆ.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್, 'ಸಂಸ್ಕೃತವು ಕೇವಲ 'ದೇವ-ವಾಣಿ' ಅಲ್ಲ, ಬದಲಿಗೆ ಕಂಪ್ಯೂಟರ್ ವಿಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯಂತಹ ಆಧುನಿಕ ಕ್ಷೇತ್ರಗಳಿಗೆ ಅನ್ವಯಿಸಬಹುದಾದ ವೈಜ್ಞಾನಿಕ ಭಾಷೆಯಾಗಿದೆ ಎಂದು ಹೇಳಿದರು.
'ಈ ಹಿಂದೆ 300 ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಹರಾಗಿದ್ದು, ಅದರಲ್ಲೂ ವಯಸ್ಸಿನ ನಿರ್ಬಂಧಗಳಿದ್ದವು. ಆದರೆ, ಹೊಸ ಯೋಜನೆಯಲ್ಲಿ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರೆಯಲಿದೆ' ಎಂದು ಹೇಳಿದರು.