ಕಾಸರಗೋಡು : ನವೀಕರಿಸಲಾದ ಕಾಸರಗೋಡು ಪ್ರೆಸ್‍ಕ್ಲಬ್‍ನ ಕಟ್ಟಡದ ಉದ್ಘಾಟನೆ ಅ. 5ರಂದು ಬೆಳಗ್ಗೆ 11ಕ್ಕೆ ಜರುಗಲಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್‍ಲೈನ್ ಮೂಲಕ ಕಟ್ಟಡದ ಉದ್ಘಾಟನೆ ನೆರವೇರಿಸುವರು.
ಲೋಕೋಪಯೋಗಿ ಖಾತೆ ಸಚಿವ ಪಿ.ಎ.ಮುಹಮ್ಮದ್ ರಿಯಾಜ್ ಅಧ್ಯಕ್ಷತೆ ವಹಿಸುವರು. ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಶಾಸಕರಾದ ಎನ್.ಎ.ನೆಲ್ಲಿಕುನ್ನು, ಇ.ಚಂದ್ರಶೇಖರನ್, ಸಿ.ಎಚ್.ಕುಂಜಂಬು, ಎ.ಕೆ.ಎಂ.ಅಶ್ರಫ್, ಎಂ.ರಾಜಗೋಪಾಲನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಆರ್.ಕಿರಣ್ ಬಾಬು ಅತಿಥಿಗಳಾಗಿ ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಮಾಧ್ಯಮ ವಿಚಾರ ಸಂಕಿರಣ ನಡೆಯಲಿರುವುದು.