ತಿರುವನಂತಪುರಂ: ವಾಯು ಮಾಲಿನ್ಯ ನಿಯಂತ್ರಣದ ಭಾಗವಾಗಿ ದೀಪಾವಳಿ ಹಬ್ಬದಂದು ರಾತ್ರಿ 8 ರಿಂದ 10 ರವರೆಗೆ ಮತ್ತು ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ರಾತ್ರಿ 11.55 ರಿಂದ 12.30 ರವರೆಗೆ ಪಟಾಕಿ ಸಿಡಿಸುವುದನ್ನು ನಿರ್ಬಂಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪತ್ರವನ್ನು ಆಧರಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಆಚರಣೆಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಪಟಾಕಿ ಸಿಡಿಸಲು ಸಮಯ ನಿರ್ಬಂಧವನ್ನು ಖಾತ್ರಿಪಡಿಸಲು ಮತ್ತು ರಾಜ್ಯದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೋಲೀಸ್ ಮುಖ್ಯಸ್ಥರಿಗೆ ಗೃಹ ಇಲಾಖೆ ನಿರ್ದೇಶನ ನೀಡಿದೆ.