ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರದಿಂದ ಗುಜರಾತ್‌ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಾತ್‌ಗೆ ಅಮಿತ್ ಶಾ ಎರಡು ದಿನಗಳ ಭೇಟಿ
0
ಅಕ್ಟೋಬರ್ 03, 2024
Tags
ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರದಿಂದ ಗುಜರಾತ್‌ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅವರು ಹಲವಾರು ಯೋಜನೆಗಳನ್ನು ಉದ್ಘಾಟಿಸಲಿದ್ದು, ನವರಾತ್ರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಮಿತ್ ಶಾ ಅವರು ಇಲ್ಲಿನ ಚಾಣಕ್ಯಪುರಿ ಪ್ರದೇಶದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಗುರುವಾರ ಬೆಳಗ್ಗೆ ಉದ್ಘಾಟಿಸಿದರು. ಇದು ಅವರು ಪ್ರತಿನಿಧಿಸುವ ಗಾಂಧಿನಗರ ಲೋಕಸಭಾ ಕ್ಷೇತ್ರದ ಅಡಿಯಲ್ಲಿ ಬರುತ್ತದೆ.
ಇಂದು ಮಧ್ಯಾಹ್ನ ಹಾಗೂ ಸಂಜೆ, ಸೋಲಾ ಆಸ್ಪತ್ರೆಯಲ್ಲಿ ಟೆಲಿ-ಪುನರ್ವಸತಿ ಕೇಂದ್ರ, ತರಕಾರಿ ಮಾರುಕಟ್ಟೆ, ನೂತನ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಮುನ್ಸಿಪಲ್ ಕಾರ್ಪೊರೇಶನ್‌ನ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ ನಂತರ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಭೆ, ಪೊಲೀಸ್ ಕಮಿಷನರ್ ಕಚೇರಿ ಕಟ್ಟಡ ಉದ್ಘಾಟನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗುತ್ತಿದ್ದಾರೆ.