ಪೆರ್ಲ: ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆ ಸೇರಿದಂತೆ ವಿವಿಧೆಡೆ ಉದ್ಯೋಗದ ಭರವಸೆ ನೀಡಿ ಬಡಜನತೆಯಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಶಿಕ್ಷಕಿ, ಮಾಜಿ ಡಿವೈಎಫ್‍ಐ ನೇತಾರೆ ಸಚಿತಾ ರೈಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಎಣ್ಮಕಜೆ ಪಂಚಾಯಿತಿ ಸಮಿತಿಯಿಂದ ಪೆರ್ಲ ಪೇಟೆಯಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯ ಕೆ.ಪಿ ಅನಿಲ್ ಕುಮಾರ್ ಧರಣಿ ಉದ್ಘಾಟಿಸಿದರು. ಬಿಜೆಪಿ ಪಂಚಾಯಿತಿ ಸಮಿತಿ ಅಧ್ಯಕ್ಷ ಸುಮಿತ್‍ರಾಜ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ನಾರಾಯಣ ನಾಯ್ಕ್, ಗ್ರಾಪಂ ಸದಸ್ಯರಾದ ಉಷಾಗಣೇಶ್, ಇಂದಿರಾ, ಆಶಾಲತಾ ಮೊದಲಾದವರು ಉಪಸ್ಥಿತರಿದ್ದರು.