ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರೀ ಶಾಲಾ ಹಳೆವಿದ್ಯಾರ್ಥಿ ಸಂಘದ ಮಹಾಸಭೆಯು ಶಾಲೆಯಲ್ಲಿ ಜರಗಿತು. ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಭಟ್ ಪೈಕೆ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ತಲೇಕ ಲಕ್ಷ್ಮೀ ನಾರಾಯಣ ಭಟ್ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಸತೀಶ ವೈ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು.
ಈ ಮಹಾಸಭೆಯಲ್ಲಿ 21 ಸದಸ್ಯರಿರುವ ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀಧರ ಭಟ್ ಚೋಕೆಮೂಲೆ, ಉಪಾಧ್ಯಕ್ಷರಾಗಿ ಚಂದ್ರಶೇಖರ ಕುರುಪ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಕೃಷ್ಣ ಪದ್ಮಾರ್ ಒಮ್ಮತದಿಂದ ಆಯ್ಕೆಯಾದರು. ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಹಳೆ ವಿದ್ಯಾರ್ಥಿಗಳನ್ನು ಸಂಘಟನೆಯ ಸದಸ್ಯರನ್ನಾಗಿಸಲು ಹಾಗೂ ಸಕ್ರಿಯ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಲು ತೀರ್ಮಾನಿಸಲಾಯಿತು. ಶಾಲಾ ಹಳೆ ವಿದ್ಯಾರ್ಥಿನಿ ಅನ್ನಪೂರ್ಣಾ ಟೀಚರ್ ಪ್ರಾರ್ಥಿಸಿದರು. ಜೊತೆ ಕಾರ್ಯದರ್ಶಿ ಹರಿನಾರಾಯಣ ಶಿರಂತಡ್ಕ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯ ಶ್ರೀ ಗಿರೀಶ ಎನ್ ವಂದಿಸಿದರು. ಪ್ರಶಾಂತ್ ಬಳ್ಳುಳ್ಳಾಯ ಉಬ್ರಂಗಳ ಕಾರ್ಯಕ್ರಮ ನಿರೂಪಿಸಿದರು.