ತಿರುವನಂತಪುರ: ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನವೀನ್ ಬಾಬು ಅವರ ಸಾವಿಗೆ ಸಂಬಂಧಿಸಿ ಕಣ್ಣೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಪಿ. ದಿವ್ಯಾ ವಿರುದ್ಧ ದೂರು ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಬುಧವಾರ ಸೂಚಿಸಿದೆ.

ಆಯೋಗದ ನ್ಯಾಯಾಂಗ ಸದಸ್ಯ ಕೆ.ಬೈಜುನಾಥ್ ಅವರು ಜಿಲ್ಲಾಡಳಿತಕ್ಕೆ ಈ ಸಂಬಂಧ ನೋಟಿಸ್ ಜಾರಿ ಮಾಡಿದ್ದಾರೆ.
ವಕೀಲ ವಿ. ದೇವದಾಸ್ ಅವರ ದೂರಿನ ಮೇರೆಗೆ ಈ ನಿರ್ದೇಶನ ನೀಡಲಾಗಿದೆ ಎಂದು ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.
ತಮ್ಮ ಬೀಳ್ಕೊಡುಗೆ ಸಮಾರಂಭಕ್ಕೆ ಸಿಪಿಎಂ ನಾಯಕಿ ದಿವ್ಯಾ ಅವರು ಆಹ್ವಾನ ಇಲ್ಲದೆ ಬಂದು, ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಅವಮಾನಿಸಿದ್ದಾರೆ. ಹಾಗಾಗಿ, ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೇವದಾಸ್ ಆರೋಪಿಸಿದ್ದಾರೆ.
ಪತ್ತನಂತಿಟ್ಟ ಎಡಿಎಂ ಆಗಿ ಅಧಿಕಾರ ವಹಿಸಿಕೊಳ್ಳಬೇಕಿದ್ದ ಬಾಬು ಅವರನ್ನು ಬರಮಾಡಿಕೊಳ್ಳಲು ಅವರ ಪತ್ನಿ ಹಾಗೂ ಅವರ ಮಕ್ಕಳು ಮಂಗಳವಾರ ಬೆಳಿಗ್ಗೆ ಚೆಂಗನ್ನೂರು ರೈಲು ನಿಲ್ದಾಣಕ್ಕೆ ತೆರಳಿದ್ದಾಗ, ಬಾಬು ಅವರು ಕ್ವಾರ್ಟರ್ಸ್‌ನಲ್ಲಿ ನೇಣು ಹಾಕಿಕೊಂಡಿರುವುದು ಪತ್ತೆಯಾಗಿತ್ತು.