ಮುಂಬೈ: ಹೋಟೆಲ್ ಉದ್ಯಮಿ ಜಯ ಶೆಟ್ಟಿ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಗ್ಯಾಂಗ್‌ಸ್ಟರ್ ಚೋಟಾ ರಾಜನ್‌ಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ಮುಂಬೈ: ಹೋಟೆಲ್ ಉದ್ಯಮಿ ಜಯ ಶೆಟ್ಟಿ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಗ್ಯಾಂಗ್‌ಸ್ಟರ್ ಚೋಟಾ ರಾಜನ್‌ಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ರೇವತಿ ಮೋಹಿತೆ ದೆರೆ ಹಾಗೂ ನ್ಯಾ. ಪೃಥ್ವಿರಾಜ್ ಚವಾಣ್ ಅವರಿದ್ದ ವಿಭಾಗೀಯ ಪೀಠ ₹ 1 ಲಕ್ಷ ಬಾಂಡ್ ಮೇಲೆ ಜಾಮೀನು ನೀಡಿದೆ.
ಕೇಂದ್ರ ಮುಂಬೈನ ಗಾಮ್‌ದೇವಿಯಲ್ಲಿ ಗೋಲ್ಡನ್ ಕ್ರೌನ್ ಹೋಟೆಲ್ ಹೊಂದಿದ್ದ ಜಯ ಶೆಟ್ಟಿ ಅವರನ್ನು ಹೋಟೆಲ್‌ನ ಮೊದಲ ಮಹಡಿಯಲ್ಲಿ 2001ರ ಮೇ 4ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಶೆಟ್ಟಿ ಅವರಿಂದ ಸುಲಿಗೆ ಮಾಡಲು ರಾಜನ್ ಗ್ಯಾಂಗ್‌ನ ಹೇಮಂತ್ ಪೂಜಾರಿ ಕರೆ ಮಾಡುತ್ತಿದ್ದ. ಆದರೆ, ಹಣ ನೀಡದ್ದಕ್ಕೆ ಶೆಟ್ಟಿ ಅವರನ್ನು ಕೊಲೆ ಮಾಡಲಾಗಿದೆ ಎಂಬುದು ತನಿಖೆಯಿಂದ ಬಹಿರಂಗವಾಗಿತ್ತು. ಈ ಪ್ರಕರಣದಲ್ಲಿ ರಾಜನ್‌ಗೆ ಇದೇ ವರ್ಷ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.