ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಇಂದು (ಅ.16) ಪ್ರಮಾಣ ವಚನ ಸ್ವೀಕರಿಸಲು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಆಹ್ವಾನ ನೀಡಿದರು.

ಕೇಂದ್ರ ಸರ್ಕಾರವು ಅಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆದ ಒಂದು ದಿನದ ಬಳಿಕ ಒಮರ್ ಅವರಿಗೆ ಆಹ್ವಾನ ನೀಡಲಾಗಿದೆ.
'ಅ.11ರಂದು ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ.ಫಾರೂಕ್ ಅಬ್ದುಲ್ಲಾ ಅವರಿಂದ ನಾನು ಸ್ವೀಕರಿಸಿದ ಪತ್ರದಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ನಿಮ್ಮನ್ನು ಆಯ್ಕೆ ಮಾಡಿದ್ದಾಗಿ ತಿಳಿಸಲಾಗಿದೆ' ಎಂದು ಸಿನ್ಹಾ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್, ಸಿಪಿಐ(ಎಂ), ಆಪ್ ಮತ್ತು ಇತರೆ ಪಕ್ಷೇತರ ಚುನಾಯಿತ ಅಭ್ಯರ್ಥಿಗಳಿಂದಲೂ ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ನೀಡಿರುವ ಬಗ್ಗೆ ಪತ್ರ ಬಂದಿವೆ. ಶ್ರೀನಗರದಲ್ಲಿ ಅ.16ರಂದು ಬೆಳಿಗ್ಗೆ 11.30ಕ್ಕೆ ಪ್ರಮಾಣ ವಚನ ಬೋಧಿಸುವುದಾಗಿ ತಿಳಿಸಿದ್ದಾರೆ.