ಶ್ರೀನಗರ: ಜಮ್ಮು ಪ್ರದೇಶದ ಚಾಂಬ್ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಸತೀಶ್ ಶರ್ಮಾ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.
ಶ್ರೀನಗರ: ಜಮ್ಮು ಪ್ರದೇಶದ ಚಾಂಬ್ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಸತೀಶ್ ಶರ್ಮಾ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.
ಈ ಮೂಲಕ ಜಮ್ಮು ಭಾಗದ ಏಕೈಕ ಸಚಿವರಾಗಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಸತೀಶ್ ಶರ್ಮಾ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿತು.
ಜಮ್ಮು ಪ್ರದೇಶದಲ್ಲಿ ಬಿಜೆಪಿ 10 ಸ್ಥಾನಗಳನ್ನು ಗೆದ್ದುಕೊಂಡಿದೆ. ಶರ್ಮಾ ಏಕೈಕ ಬಿಜೆಪಿಯೇತರ ಸದಸ್ಯರಾಗಿದ್ದು, ಸರ್ಕಾರದ ಭಾಗವಾಗಿದ್ದಾರೆ.
ನಿನ್ನೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ ಶರ್ಮಾ, ಜಮ್ಮು ಭಾಗಕ್ಕೆ ಸಚಿವ ಸ್ಥಾನ ನೀಡಿರುವುದಕ್ಕೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರಿಗೆ ಕೃತಜ್ಞತೆ ಸಲ್ಲಿಸಿದರು.
'ನನಗೆ ಮಾತಾ ರಾಣಿ ಆಶೀರ್ವಾದ ನೀಡಿದ್ದಾರೆ. ಜನರಿಗೆ ಮತ್ತು ಓಮರ್ ಅಬ್ದುಲ್ಲಾ ಜೀ ಅವರಿಗೆ ಧನ್ಯವಾದಗಳು, ಜಮ್ಮು ಪ್ರದೇಶಕ್ಕೆ ನಿರೀಕ್ಷೆಗಿಂತ ಹೆಚ್ಚು ಕೆಲಸ ಮಾಡುವುದಾಗಿ ಶರ್ಮಾ ಹೇಳಿದರು.