ನವದೆಹಲಿ: ಹೈಕೋರ್ಟ್‌ಗಳು ತೆರೆದ ನ್ಯಾಯಾಲಯಗಳಲ್ಲಿ ಉಕ್ತಲೇಖನ ಮೂಲಕ ನೀಡಿದ್ದ ಆದೇಶಗಳನ್ನು ಹಿಂತೆಗೆದುಕೊಳ್ಳುವುದು ಹಾಗೂ ಪ್ರಕರಣದ ಮರುವಿಚಾರಣೆ ನಡೆಸುವುದಕ್ಕೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಹಾಗೂ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ರಚಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ನಿವೃತ್ತ ಐಪಿಎಸ್ ಅಧಿಕಾರಿ ಎಂ.ಎಸ್.ಜಾಫರ್ ಸೇಟ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಮೊದಲಿಗೆ ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್, ನಂತರ ತನ್ನ ನಿರ್ದೇಶನ ಮಾರ್ಪಡಿಸಿ, ಪ್ರಕರಣ ಕುರಿತು ಮತ್ತೆ ವಿಚಾರಣೆ ನಡೆಸಿತ್ತು. ಈ ಪ್ರಕರಣ ಕುರಿತ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಮಾತು ಹೇಳಿದೆ.
ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.
ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಹಾಗೂ ಅಧಿಕಾರಿ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದ ವಿಚಾರಣೆಗೂ ಪೀಠವು ತಡೆ ನೀಡಿ ಆದೇಶಿಸಿದೆ.