ಕಣ್ಣೂರು: ಎಡಿಎಂ ನವೀನ್ ಬಾಬು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಪರಾರಿಯಾಗಿದ್ದ ಕಣ್ಣೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪಿ.ಪಿ.ದಿವ್ಯಾ ರಕ್ತದೊತ್ತಡದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವರೆಂಬ ಮಾಹಿತಿ ಹೊರಬಿದ್ದಿದೆ.
ದಿವ್ಯಾ ನಿನ್ನೆ ರಾತ್ರಿ ಪಯ್ಯನ್ನೂರು ಸಹಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅರ್ಧ ಗಂಟೆಯ ನಂತರ ಅವರು ಹಿಂದೆ ತೆರಳಿದರು. ಆಸ್ಪತ್ರೆ ಬಳಿ ಕೆಲವು ಪೋಲೀಸ್ ಅಧಿಕಾರಿಗಳು ಇದ್ದರು ಎಂದು ವರದಿಯಾಗಿದೆ.
ಆದರೆ ಆಸ್ಪತ್ರೆಯ ಅಧಿಕಾರಿಗಳು ದಿವ್ಯಾ ವೈದ್ಯಕೀಯ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ದಿವ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಇಂದು ಪ್ರಕಟಿಸಲಿರುವಾಗ ಅವರು ನಿನ್ನೆ ರಾತ್ರಿ ಆಸ್ಪತ್ರೆಗೆ ಭೇಟಿ ನಿಡಿರುವುದು ಅಚ್ಚರಿಮೂಡಿಸಿದೆ. ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ನಿಸಾರ್ ಅಹಮದ್ ಅವರು ಜಾಮೀನು ನಿರಾಕರಿಸಿ ತೀರ್ಪು ನೀಡಿದರು. ನವೀನ್ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ದಿವ್ಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ ದಿವ್ಯಾ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದರು.