HEALTH TIPS

ವಿದ್ಯಾರ್ಥಿಗಳಿಗೆ ಕತ್ತೆ, ಒಂಟೆ ಅನ್ನುವಂತಿಲ್ಲ: ಬಿಹಾರದ ಹೊಸ ಕಾನೂನು

          ಟ್ನಾ: ಬಿಹಾರದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ವಿರುದ್ಧ ಕೀಳುಮಟ್ಟದ ಭಾಷೆ ಬಳಸುತ್ತಿರುವ ಬಗ್ಗೆ ಪೋಷಕರಿಂದ ವ್ಯಾಪಕ ದೂರುಗಳು ಬಂದ ಬೆನ್ನಲ್ಲೇ ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ಈ ಕುರಿತು ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದ್ದು ತಕ್ಷಣದಿಂದಲೇ ಇದು ಪಾಲನೆ ಆಗಬೇಕು ಎಂದು ಸೂಚಿಸಿದೆ.

        ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನು 'ಕತ್ತೆ', ಎತ್ತರ ಇರುವ ವಿದ್ಯಾರ್ಥಿಗಳನ್ನು 'ಒಂಟೆ' ಎಂದು ನಿಂದಿಸುವಂತಿಲ್ಲ. ಸುಂದರವಾಗಿ ಕಾಣದ ಮಕ್ಕಳನ್ನು 'ಕಪ್ಪು' ವರ್ಣದ ಪದಗಳನ್ನು ಬಳಸಿ ಕೀಳಾಗಿ ನೋಡುವಂತಿಲ್ಲ. ಅಲ್ಲದೆ 'ಮಂದ ಬುದ್ಧಿ' ಎಂಬ ಪದಗಳನ್ನೂ ಬಳಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.

           ಶಿಕ್ಷಕರು ತಮ್ಮ ಮಕ್ಕಳನ್ನು ವಿವಿಧ ಅಪಮಾನಕರ ಪದಗಳನ್ನು ಬಳಸಿ ನಿಂದಿಸುತ್ತಿದ್ದ ಕುರಿತು, ಬಿಹಾರದ ವಿವಿಧ ಸರ್ಕಾರಿ ಶಾಲೆಗಳ ಪ್ರಾಂಶುಪಾಲರಿಗೆ ಪೋಷಕರು ಹಲವು ದೂರುಗಳನ್ನು ಸಲ್ಲಿಸಿದ್ದರು. ಆದರೆ, ಪ್ರಾಂಶುಪಾಲರು ಇವುಗಳನ್ನು ನಿರ್ಲಕ್ಷಿಸಿದ್ದ ಕಾರಣ, ಪೋಷಕರ ಆಕ್ರೋಶ ತೀವ್ರಗೊಂಡಿತ್ತು.

         ವಿಷಯದ ಗಾಂಭೀರ್ಯ ಅರಿತ ಶಿಕ್ಷಣ ಇಲಾಖೆಯು ಈ ಕುರಿತು ಮಾರ್ಗಸೂಚಿ ಪ್ರಕಟಿಸಿದೆ. ಅಲ್ಲದೆ ವಿದ್ಯಾರ್ಥಿಗಳ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸುವ ಶಿಕ್ಷಕರನ್ನು ಗುರುತಿಸಿ, ಅವುಗಳನ್ನು ಬಳಸದಂತೆ ಎಚ್ಚರಿಕೆ ನೀಡಬೇಕು ಮತ್ತು ಶಾಲಾ ಅವರಣದಲ್ಲಿ ಆರೋಗ್ಯಕರ ವಾತಾವರಣ ಇರುವಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಿ ಶಾಲೆಗಳ ಪ್ರಾಂಶುಪಾಲರಿಗೆ ಸರ್ಕಾರ ಸೂಚನೆ ನೀಡಿದೆ.

             ಶಾಲೆಗಳಲ್ಲಿ ನಡೆಯುವ ಪೋಷಕರು ಮತ್ತು ಶಿಕ್ಷಕರ ಸಭೆಯಲ್ಲಿ ಹೇಗೆ ಶಿಕ್ಷಕರು ಮಕ್ಕಳ ಮೌಲ್ಯಮಾಪನ ಮಾಡುತ್ತಾರೆಯೋ ಹಾಗೆಯೇ ವಿದ್ಯಾರ್ಥಿಗಳೂ ಶಿಕ್ಷಕರ ಮೌಲ್ಯ ನಿರ್ಣಯ ಮಾಡಬೇಕು ಎಂದು ಪ್ರಾಂಶುಪಾಲರಿಗೆ ತಿಳಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

            ಪ್ರತಿಭಾವಂತ ವಿದ್ಯಾರ್ಥಿಗಳನ್ನಷ್ಟೇ ಅಲ್ಲದೆ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೂ ತರಗತಿಯ ನಾಯಕತ್ವ ವಹಿಸಲು ಅವಕಾಶ ಮಾಡಿಕೊಡಬೇಕು. ಇದರಿಂದ ಅವರಲ್ಲೂ ನಾಯಕತ್ವದ ಗುಣಗಳು ಬೆಳೆಯುತ್ತವೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries