HEALTH TIPS

ಪಿಎಂ-ಕಿಸಾನ್‌ ಹಣ ಇಂದು ಬಿಡುಗಡೆ

 ವದೆಹಲಿ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯಡಿ (ಪಿಎಂ-ಕಿಸಾನ್) 18ನೇ ಕಂತಿನ ₹20 ಸಾವಿರ ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು, ಶನಿವಾರ ಬಿಡುಗಡೆ ಮಾಡಲಿದ್ದಾರೆ.

ದೇಶದ 9.4 ಕೋಟಿಗೂ ಹೆಚ್ಚು ರೈತರಿಗೆ ಈ ಯೋಜನೆಯಡಿ ಸೌಲಭ್ಯ ಸಿಗಲಿದೆ. ಮಹಾರಾಷ್ಟ್ರದ ವಾಶಿಮ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆಗೆ (ಡಿಬಿಟಿ) ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.

ಮಹಾರಾಷ್ಟ್ರದ ರೈತರು ನಮೋ ಶೆಟ್ಕರಿ ಮಹಾಸನ್ಮಾನ್‌ ನಿಧಿಯಡಿ ಹೆಚ್ಚುವರಿಯಾಗಿ ₹2 ಸಾವಿರ ಕೋಟಿ ಪಡೆಯಲಿದ್ದಾರೆ.

17 ಕಂತುಗಳಲ್ಲಿ ಮಹಾರಾಷ್ಟ್ರಕ್ಕೆ ಅಂದಾಜು ₹32 ಸಾವಿರ ಕೋಟಿ ಲಭಿಸಿದೆ. 1.20 ಕೋಟಿ ರೈತರು ಇದರ ಫಲಾನುಭವಿಗಳಾಗಿದ್ದಾರೆ. 18ನೇ ಕಂತಿನಲ್ಲಿ 91 ಲಕ್ಷಕ್ಕೂ ಹೆಚ್ಚು ರೈತರಿಗೆ ₹1,900 ಕೋಟಿ ನೀಡಲಾಗುವುದು ಎಂದು ತಿಳಿಸಿದೆ.

2019ರ ಫೆಬ್ರುವರಿಯಲ್ಲಿ ಕೇಂದ್ರ ಸರ್ಕಾರವು ಪಿಎಂ-ಕಿಸಾನ್‌ ಯೋಜನೆಗೆ ಚಾಲನೆ ನೀಡಿತ್ತು. ವಾರ್ಷಿಕವಾಗಿ ಮೂರು ಸಮಾನ ಕಂತಿನಲ್ಲಿ ಒಟ್ಟು ₹6 ಸಾವಿರ ಮೊತ್ತವು ರೈತರಿಗೆ ಸಿಗಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries