ಕಾಸರಗೋಡು: ಜಿಲ್ಲೆಯ ವಿವಿಧ ಶಕ್ತಿ ಕೇಂದ್ರಗಳಲ್ಲಿ ನವರಾತ್ರಿ ಮಹೋತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು. ಮುಂದಿನ ಒಂಬತ್ತು ದಿವಸಗಳ ಕಾಲ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವ ನಡೆಯಲಿದೆ.
ಕಾಸರಗೋಡು ನಗರದ ಕೊರಕ್ಕೋಡು ಶ್ರೀ ಆರ್ಯಕಾತ್ರ್ಯಾಯಿನಿಮಹಾದೇವಿ ಕ್ಷೇತ್ರ, ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ಕ್ಷೇತ್ರ, ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಅಣಂಗೂರು ಶ್ರೀ ಮೀಪುಗುರಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ, ಕೋಟೆಕಣಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ, ಆದೂರು ಶ್ರೀ ಭಗವತೀ ಕ್ಷೇತ್ರ, ಬಜಕೂಡ್ಲು ಶ್ರೀ ದುರ್ಗಾಪರಮೇಶ್ವರೀ ಭಜನಾಮಂದಿರ, ಕುಂಜರಕಾನ ಶ್ರೀ ದುಗಾಪರಮೇಶ್ವರೀ ಕ್ಷೇತ್ರ, ಕಾಸರಗೋಡು ಕಾಳ್ಯಂಗಾಡು ಶ್ರಿ ಮೂಕಾಂಬಿಕಾ ಕ್ಷೇತ್ರ, ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ, ಬಂಗ್ರಮಂಜೇಶ್ವರ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನ, ಮಂಗಲ್ಪಾಡಿ ಏಕಾಹ ಭಜನಾಮಂದಿರ, ಚಿಪ್ಪಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪೊಯ್ಯೆ ಶ್ರೀ ಚಾಮುಂಡೇಶ್ವರೀ ದೇವಸ್ಥಾನ, ತೂಮಿನಾಡು ಶ್ರೀ ಮಹಾಕಾಳಿ ಭಜನಾಮಂದಿರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನವರಾತ್ರಿ ಮಹೋತ್ಸವ ಆರಂಭಗೊಂಡಿತು.
ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಗಣಪತಿ ಹೋಮದೊಂದಿಗೆ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು.ತುಲಾಭಾರಸೇವೆ, ವಿಶೇಷ ನವರಾತ್ರಿ ಪೂಜೆ ನಡೆಯಿತು. ಕೊರಕ್ಕೋಡು ಶ್ರೀ ಆರ್ಯಕಾತ್ರ್ಯಾಯಿನೀ ಮಹಾದೇವಿ ಕ್ಷೇತ್ರದಲ್ಲಿ ಚಂಡಿಕಾ ಯಾಗದೊಂದಿಗೆ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಕೊರಕ್ಕೋಡು ಶ್ರೀ ಆರ್ಯಕಾತ್ರ್ಯಾಯಿನಿಮಹಾದೇವಿ ಕ್ಷೇತ್ರದಲ್ಲಿ ಚಂಡಿಕಾ ಹವನದೊಂದಿಗೆ ನವರಾತ್ರಿಮಹೋತ್ಸವಕ್ಕೆ ಚಾಲನೆ ನೀಡಲಾಯಿತು.