ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ವಲಸೆ ಕಾರ್ಮಿಕನ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದೆ.
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ವಲಸೆ ಕಾರ್ಮಿಕನ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದೆ.
ಕಾರ್ಮಿಕನನ್ನು ಉತ್ತರ ಪ್ರದೇಶದ ಪ್ರೀತಮ್ ಸಿಂಗ್ ಎಂದು ಗುರುತಿಸಲಾಗಿದೆ. ಅವರ ಬಲಗೈಗೆ ಗಾಯವಾಗಿದೆ. ಇದು ಶಂಕಿತ ಉಗ್ರರ ದಾಳಿ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರಕರಣದ ಬೆನ್ನಲ್ಲೇ ಪೊಲೀಸ್ ಹಾಗೂ ಭದ್ರತಾ ಪಡೆಗಳ ಜಂಟಿ ತಂಡ ಘಟನಾ ಸ್ಥಳಕ್ಕೆ ಧಾವಿಸಿದ್ದು, ದಾಳಿಕೋರರಿಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ.
ಕೇಂದ್ರ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗಗಂಗೀರ್ ಪ್ರದೇಶದ ನಿರ್ಮಾಣ ಕಾಮಗಾರಿ ಸ್ಥಳದ ಮೇಲೆ ನಾಲ್ಕು ದಿನಗಳ ಹಿಂದಷ್ಟೇ ಭಯೋತ್ಪಾದಕ ದಾಳಿ ನಡೆದಿತ್ತು. ದಾಳಿಯಿಂದಾಗಿ ಸ್ಥಳೀಯ ವೈದ್ಯ ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಏಳು ಜನರು ಹತ್ಯೆಯಾಗಿದ್ದರು.