ತಿರುವನಂತಪುರಂ: ವಾಯು ಮಾಲಿನ್ಯ ನಿಯಂತ್ರಣದ ಭಾಗವಾಗಿ ದೀಪಾವಳಿ ಆಚರಣೆ ವೇಳೆ ನಿಶ್ಯಬ್ದ ವಲಯಗಳಾದ ಆಸ್ಪತ್ರೆ, ನ್ಯಾಯಾಲಯ, ಶಿಕ್ಷಣ ಸಂಸ್ಥೆಗಳು, ಪ್ರಾರ್ಥನಾ ಸ್ಥಳಗಳ 100 ಮೀಟರ್ ವ್ಯಾಪ್ತಿಯಲ್ಲಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್ ಆದೇಶ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶನವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು ಬಳಸಬೇಕು ಎಂಬ ರಾಜ್ಯ ಗೃಹ ಇಲಾಖೆ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ರಾತ್ರಿ 8 ರಿಂದ 10 ರವರೆಗೆ ಮತ್ತು ಕ್ರಿಸ್‍ಮಸ್ ಮತ್ತು ಹೊಸ ವರ್ಷದ ಆಚರಣೆಯಲ್ಲಿ ರಾತ್ರಿ 11.55 ರಿಂದ 12.30 ರವರೆಗೆ ರಾಜ್ಯ ಸರ್ಕಾರ ಈ ಹಿಂದೆ ಆದೇಶ ಹೊರಡಿಸಿತ್ತು. ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಶಿಫಾರಸಿನ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.