HEALTH TIPS

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು, ಪುತ್ರರಿಗೆ ಜಾಮೀನು ನೀಡಿದ ದೆಹಲಿ ಕೋರ್ಟ್

 ವದೆಹಲಿ: ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್‌ ಹಾಗೂ ಅವರ ಮಕ್ಕಳಾದ ತೇಜಸ್ವಿ ಯಾದವ್‌, ತೇಜ್‌ ಪ್ರತಾಪ್‌ ಯಾದವ್‌ ಅವರಿಗೆ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್‌ ಮಾಡಿದೆ.

ರೈಲ್ವೆ ಇಲಾಖೆಯಲ್ಲಿನ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಸಂಬಂಧ ಆರ್‌ಜೆಡಿ ನಾಯಕರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ತಲಾ ₹ 1 ಲಕ್ಷ ಮೊತ್ತದ ಬಾಂಡ್‌ ನೀಡುವಂತೆ ಸೂಚಿಸಿ ಜಾಮೀನು ನೀಡಿರುವ ನ್ಯಾಯಾಲಯ, ವಿಚಾರಣೆಯನ್ನು ಇದೇ ತಿಂಗಳ 25ಕ್ಕೆ ಮುಂದೂಡಿದೆ.


ಬಳಿಕ ಮಾತನಾಡಿರುವ ತೇಜಸ್ವಿ, 'ರಾಜಕೀಯ ಪಿತೂರಿ ನಡೆಸಲಾಗುತ್ತಿದೆ. ತನಿಖಾ ಸಂಸ್ಥೆಗಳನ್ನು ದರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ನಮಗೆ ಜಯ ಸಿಗುವುದು ನಿಶ್ಚಿತ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್‌ ಕುಟುಂಬದ ಆಪ್ತರನ್ನು ಬಂಧಿಸಿದ ಇ.ಡಿ

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries