HEALTH TIPS

ಬಾಂಗ್ಲಾ: ವಿವಿ ಹಿಂದೂ ಕ್ಯಾಂಟೀನ್‌ನಲ್ಲಿ ಗೋಹತ್ಯೆ ಬೆದರಿಕೆ; ಹರಿದಾಡಿದ ವಿಡಿಯೊ

 ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜ್ಯನ್ಯಗಳ ನಡುವೆಯೇ ಢಾಕಾದಲ್ಲಿನ ವಿಶ್ವವಿದ್ಯಾಲಯದ ಹಿಂದೂ ಕ್ಯಾಂಟೀನ್‌ಗೆ ನುಗ್ಗಿದ ವಿದ್ಯಾರ್ಥಿಗಳ ಗುಂಪೊಂದು ಗೋಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ.

ಇದರ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ವಿದ್ಯಾರ್ಥಿಗಳ ಗುಂಪು ಹಸುವೊಂದನ್ನು ಕ್ಯಾಂಟೀನ್‌ ಒಳಕ್ಕೆ ತಂದು ಗೋಮಾಂಸ ನೀಡುವಂತೆ ಒತ್ತಾಯಿಸಿದೆ. ಇಲ್ಲದಿದ್ದರೆ ಕ್ಯಾಂಟೀನ್‌ನ ಒಳಗೇ ಹಸುವನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿರುವ ವಿಡಿಯೊವೊಂದು ಹರಿದಾಡುತ್ತಿದೆ. ಢಾಕಾ ವಿವಿಯ ಕ್ಯಾಂಟೀನ್‌ ಹಿಂದೂ ವ್ಯಕ್ತಿಗೆ ಸೇರಿದ್ದು, ಅಲ್ಲಿ ಗೋಮಾಂಸ ಸೇವನೆಗೆ ಅವಕಾಶ ಇಲ್ಲ ಎನ್ನಲಾಗಿದೆ. ಇದನ್ನು ವಿರೋಧಿಸಿರುವ ಮುಸ್ಲಿಂ ವಿದ್ಯಾರ್ಥಿಗಳು ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.


ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಹೆಚ್ಚುತ್ತಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊಗಳು ಅಲ್ಪಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಘಾಸಿಗೊಳಿಸುವ ಕಳವಳ ಹೆಚ್ಚಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries