ನವದೆಹಲಿ: ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯು (ಪಿಎಂಎಲ್‌ಎ) ಬಹಳ ಕಠಿಣವಾಗಿದ್ದರೂ, ಆರೋಪಿಯು ಆರೋಗ್ಯವಾಗಿ ಇಲ್ಲದಿದ್ದಾಗ ಆತನಿಗೆ ಈ ಕಾಯ್ದೆಯ ಅಡಿಯಲ್ಲಿ ಜಾಮೀನು ನೀಡಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ನವದೆಹಲಿ: ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯು (ಪಿಎಂಎಲ್‌ಎ) ಬಹಳ ಕಠಿಣವಾಗಿದ್ದರೂ, ಆರೋಪಿಯು ಆರೋಗ್ಯವಾಗಿ ಇಲ್ಲದಿದ್ದಾಗ ಆತನಿಗೆ ಈ ಕಾಯ್ದೆಯ ಅಡಿಯಲ್ಲಿ ಜಾಮೀನು ನೀಡಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಸೇವಾ ವಿಕಾಸ ಸಹಕಾರ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಅಮರ್ ಸಾಧುರಾಮ್ ಮೂಲಚಂದಾನಿ ಅವರಿಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.
ಅಮರ್ ಅವರು, ₹429 ಕೋಟಿ ಮೊತ್ತದ ಹಣದ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನದಲ್ಲಿದ್ದಾರೆ. ಅವರನ್ನು 2023ರ ಜುಲೈ 1ರಂದು ಬಂಧಿಸಲಾಗಿತ್ತು.
ಆರೋಪಿಯ ವಿರುದ್ಧ ನಾಲ್ಕು ಎಫ್‌ಐಆರ್‌ಗಳು ಇವೆ ಎಂದು ಹಿರಿಯ ವಕೀಲ ಎ.ಎಸ್. ನಾಡಕರ್ಣಿ ಅವರು ಪೀಠದ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ನ್ಯಾಯಪೀಠವು, 'ಪಿಎಂಎಲ್‌ಎ ಕಾಯ್ದೆಯು ಅದೆಷ್ಟೇ ಕಠಿಣವಾಗಿರಬಹುದು, ನ್ಯಾಯಮೂರ್ತಿಗಳಾದ ನಾವು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಕೆಲಸ ಮಾಡಬೇಕಾಗುತ್ತದೆ. ಅನಾರೋಗ್ಯಕ್ಕೆ ತುತ್ತಾಗಿರುವ ವ್ಯಕ್ತಿಗೆ ಜಾಮೀನು ನೀಡಬೇಕು ಎಂದು ಕಾನೂನು ಹೇಳುತ್ತದೆ' ಎಂದು ತಿಳಿಸಿತು.
ಅಮರ್ ಅವರು ಒಂದು ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಜೈಲಿನಲ್ಲಿ ಇದ್ದಾರೆ ಎಂಬುದನ್ನು ಪೀಠವು ದಾಖಲಿಸಿಕೊಂಡಿತು.
ಅಮರ್ ಅವರು ವೈದ್ಯಕೀಯ ಕಾರಣಕ್ಕೆ ತಮಗೆ ಜಾಮೀನು ನೀಡಬೇಕು ಎಂಬ ಕೋರಿಕೆಯೊಂದಿಗೆ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಆಗಸ್ಟ್‌ನಲ್ಲಿ ವಜಾಗೊಳಿಸಿದೆ. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.