HEALTH TIPS

ತಪ್ಪಿದ ಭಾರಿ ಅನಾಹುತ: ಆಗಸದಲ್ಲಿ ಗಿರಕಿ ಹೊಡೆದು ಸುರಕ್ಷಿತವಾಗಿ ಲ್ಯಾಂಡ್​ ಆದ ಏರ್​ ಇಂಡಿಯಾ ವಿಮಾನ!

         ಚೆನ್ನೈ: ತಮಿಳುನಾಡಿನಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್ ವಿಮಾನ ( Air India flight ) ದಲ್ಲಿ ದಿಢೀರ್ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಇದಕ್ಕೂ ಮುನ್ನ ಕೆಲವು ಗಂಟೆಗಳ ಕಾಲ ತಮಿಳುನಾಡಿನ ತಿರುಚ್ಚಿ ನಗರದ ಮೇಲೆ ವಿಮಾನ ಗಿರಕಿ ಹೊಡೆದಿದ್ದು, ಪ್ರಯಾಣಿಕರಲ್ಲಿ ಆತಂಕ ಮನೆ ಮಾಡಿತ್ತು.

         ಕೊನೆಗೂ ಸುರಕ್ಷಿತವಾಗಿ ಲ್ಯಾಂಡ್​ ಆಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

IX613 ವಿಮಾನ 141 ಪ್ರಯಾಣಿಕರೊಂದಿಗೆ ಇಂದು ಸಂಜೆ ಸಂಜೆ 5.40ಕ್ಕೆ ತಿರುಚ್ಚಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿತ್ತು. ಇದರ ಬೆನ್ನಲ್ಲೇ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತ ಪೈಲಟ್​ ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡಿಂಗ್​ ಮಾಡಿದ್ದಾರೆ.


          ಇನ್ನು ವಿಮಾನದಲ್ಲಿ ಇಂಧನ ತುಂಬಿದ್ದರಿಂದ ತಕ್ಷಣವೇ ಸುರಕ್ಷಿತ ಲ್ಯಾಂಡಿಂಗ್ ಸಾಧ್ಯವಾಗದೇ ತಿರುಚ್ಚಿ ಬಳಿ ಸುಮಾರು 2.30 ಗಂಟೆಗಳ ಕಾಲ ಆಕಾಶದಲ್ಲಿ ಸುತ್ತಾಡಿದೆ. ವಿಮಾನದಲ್ಲಿ ಇಂಧನ ಕಡಿಮೆಯಾದ ಬಳಿಕ ಎಮರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಯಿತು.

               ವಿಮಾನ ಲ್ಯಾಂಡಿಂಗ್ ವೇಳೆ ಯಾವುದೇ ದೊಡ್ಡ ಅಪಘಾತ ಸಂಭವಿಸದಂತೆ ಖಚಿತಪಡಿಸಿಕೊಳ್ಳಲು 20ಕ್ಕೂ ಹೆಚ್ಚು ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳನ್ನು ವಿಮಾನ ನಿಲ್ದಾಣದಲ್ಲಿ ಇರಿಸಲಾಗಿತ್ತು. ಈ ಘಟನೆ ಸಂಬಂಧ ಡಿಜಿಸಿಎ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries