ನವದೆಹಲಿ: ಜಾನ್ ಬ್ರಿಟ್ಟಾಸ್ ಅವರನ್ನು ಅತ್ಯುತ್ತಮ ಸಂಸದೀಯ ಪಟುವಾಗಿ ಆಯ್ಕೆ ಮಾಡಿ ಪಿಆರ್ ಏಜೆನ್ಸಿ ಪ್ರಶಸ್ತಿ ನೀಡಿ ಗೌರವಿಸಿದೆ ಎಂಬ ಅಂಶ ಬೆಳಕಿಗೆ ಬಂದಿದೆ.
ಸಂಸದ್ ರತ್ನ ಪ್ರಶಸ್ತಿಯನ್ನು ಪ್ರತಿ ವರ್ಷ ಕೆಲವು ಸಂಸದರಿಗೆ ಚೆನ್ನೈ ಮೂಲದ ಖಾಸಗಿ ಪಿ.ಆರ್.ಏಜೆನ್ಸಿ ಘೋಷಿಸುತ್ತದೆ. ಕಳೆದ ಬಾರಿ ಸಿಪಿಎಂ ರಾಜ್ಯಸಭಾ ಸದಸ್ಯ ಜಾನ್ ಬ್ರಿಟಾಸ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ದೆಹಲಿಯಲ್ಲಿ ಕಾರ್ಪೋರೇಷನ್ ಬ್ಯಾಂಕ್‍ನ ಸಂಪರ್ಕ ಅಧಿಕಾರಿಯಾಗಿದ್ದ ತಮಿಳುನಾಡು ಮೂಲದ ಶ್ರೀನಿವಾಸನ್ ಅವರು ನಡೆಸುತ್ತಿರುವ ಪ್ರೈಮ್ ಪಾಯಿಂಟ್ ಫೌಂಡೇಶನ್ ಸಂಸ್ಥೆಯು ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಐಐಟಿ ಮದ್ರಾಸ್ ಸಹಯೋಗದಲ್ಲಿ ಚೆನ್ನೈನಲ್ಲಿ ನಡೆಯುವ ಖಾಸಗಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ನೇತೃತ್ವದಲ್ಲಿ ಆರಂಭಗೊಂಡಿದ್ದು, ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ನೇತೃತ್ವದ ತೀರ್ಪುಗಾರರ ತಂಡವು 2010 ರಲ್ಲಿ ಮೊದಲ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆನ್‍ಲೈನ್‍ನಲ್ಲಿ ಉದ್ಘಾಟಿಸಿರುವುದಷ್ಟೇ ಈ ಸಂಸ್ಥೆಯ ಹೆಗ್ಗಳಿಕೆಯಾಗಿ ಹೇಳಲಾಗಿದೆ. ಆದರೆ ಕಲಾಂ ಅವರ ಪಾತ್ರ. ಆನ್ ಲೈನ್ ಮೂಲಕ ಉದ್ಘಾಟಿಸಿರುವುದಷ್ಟೇ ಎಂಬುದು ಯಾವ ಪಡಪೋಷಿಗಳೂ ಗಮನಿಸಬಹುದಾದದ್ದಾಗಿದೆ.