ಕಾಸರಗೋಡು: ಕುಂಬಳೆ ಸೀಮೆಯ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ 2025 ಮಾ. 27ರಿಂದ ಏ. 7ರ ವರೆಗೆ ನಡೆಯಲಿದ್ದು, ಬ್ರಹ್ಮಕಲಶೋತ್ಸವದ ಅಲಂಕಾರ ಸಮಿತಿ ಸಭೆ ದೇವಸ್ಥಾನ ವಠಾರದಲ್ಲಿ ಜರುಗಿತು.
ಮಾಣಿ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಸಭೆ ಆಯೋಜಿಸಲಾಗಿತ್ತು. ಅಲಂಕಾರ ಸಮಿತಿ ಅಧ್ಯಕ್ಷ ಯೋಗೇಶ್ ಎಂ ಆರ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮ ಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ ಕಾಮತ್, ಕಾರ್ಯದರ್ಶಿಗಳಾದ ನಾರಾಯಣಯ್ಯ ಮಾಸ್ಟರ್, ಅಲಂಕಾರ ಸಮಿತಿಯ ಕಾರ್ಯದರ್ಶಿ ಸಂದೀಪ್ ಮಧೂರು, ಬ್ರಹ್ಮಕಲಶ ಸಮಿತಿಯ ಪದಾಧಿಕಾರಿಗಳು ಹಾಗೂ ಕ್ಷೇತ್ರ ಪರಿಸರದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಭಾಶಂಕರ ಮಾಸ್ಟರ್ ಸ್ವಾಗತಿಸಿದರು. ಧನಂಜಯ ಮಧೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಜಿತ್ ಮಧೂರು ವಂದಿಸಿದರು.