ಮಂಜೇಶ್ವರ: ವರ್ಕಾಡಿ ಕೊಡ್ಲಮೊಗರು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವೆಂಡಿಂಗ್ ಮೆಶಿನ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ವರ್ಕಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ. ಎಸ್ ಸಮಾರಂಭ ಉದ್ಘಾಟಿಸಿದರು.
ಗ್ರಾಮ ಪಂಚಾಯಿತಿ ಸದಸ್ಯೆ ಆಶಾಲತಾ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್, ಶಾಲಾ ಪ್ರಾಂಶುಪಾಲ ವಿಜಯ ಕುಮಾರ್, ಉಪಾಧ್ಯಕ್ಷ ಮೋಹನ್ ಮಾಸ್ಟರ್ ಮತ್ತು ಸಹಾಯಕ ಕಾರ್ಯದರ್ಶಿ ಮಧುಕುಮಾರ್, ಆರೋಗ್ಯ ನಿರೀಕ್ಷಕಿ ಜಾಸ್ಮೀನ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಕೃಷ್ಣ ವೇಣಿ ಸ್ವಾಗತಿಸಿದರು. ವನಿತಾ ಕಾರ್ಯಕ್ರಮ ನಿರೂಪಿಸಿದರು. ಸ್ಮಿತಾ ವಂದಿಸಿದರು.