ನವದೆಹಲಿ: ದೀಪಾವಳಿ ಹಬ್ಬಕ್ಕೂ ಮುನ್ನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಗಣನೀಯವಾಗಿ ಹೆಚ್ಚುತ್ತಿದ್ದು, ಎಂಟು ವಾಯುಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ 'ಅತ್ಯಂತ ಕಳಪೆ' ದಾಖಲಾಗಿದೆ.
ನವದೆಹಲಿ: ದೀಪಾವಳಿ ಹಬ್ಬಕ್ಕೂ ಮುನ್ನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಗಣನೀಯವಾಗಿ ಹೆಚ್ಚುತ್ತಿದ್ದು, ಎಂಟು ವಾಯುಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ 'ಅತ್ಯಂತ ಕಳಪೆ' ದಾಖಲಾಗಿದೆ.
ಬೆಳಿಗ್ಗೆ 9ರ ವೇಳೆಗೆ ಗಾಳಿಯ ಗುಣಮಟ್ಟದ ಸೂಚ್ಯಂಕ(ಎಕ್ಯೂಐ) 278 ದಾಖಲಾಗಿದೆ.
'36 ವಾಯುಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳ ಪೈಕಿ ಆನಂದ್ ವಿಹಾರ್, ಅಶೋಕ್ ವಿಹಾರ್, ಅಯಾ ನಗರ, ಬವಾನಾ, ಜಹಾಂಗೀರ್ಪುರಿ, ಮುಂಡ್ಕಾ, ವಿವೇಕ್ ವಿಹಾರ್ ಮತ್ತು ವಜೀರ್ಪುರ್ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ದಾಖಲಾಗಿದೆ' ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಅಂಕಿ-ಅಂಶಗಳು ತಿಳಿಸಿವೆ.
ಎಕ್ಯೂಐ ಮಟ್ಟವು ಸೊನ್ನೆಯಿಂದ 50 ರಷ್ಟಿದ್ದರೆ 'ಉತ್ತಮ' ಎಂದು, 51ರಿಂದ 100 ರಷ್ಟಿದ್ದರೆ 'ಸಮಾಧಾನಕರ', 101 ರಿಂದ 200 ರಷ್ಟಿದ್ದರೆ 'ಸಾಧಾರಣ', 201 ರಿಂದ 300 ರಷ್ಟಿದ್ದರೆ 'ಕಳಪೆ' ಹಾಗೂ 301 ರಿಂದ 400 ರಷ್ಟಿದ್ದರೆ 'ಅತ್ಯಂತ ಕಳಪೆ' ಎಂದು ಹೇಳಲಾಗುತ್ತದೆ. 401ರಿಂದ 450ರಷ್ಟು ಕಂಡು ಬಂದರೆ 'ತೀವ್ರ ಕಳಪೆ' ಹಾಗೂ 450ಕ್ಕಿಂತ ಹೆಚ್ಚಾದರೆ 'ಅತ್ಯಂತ ಅಪಾಯಕಾರಿ' ಎಂದು ಪರಿಗಣಿಸಲಾಗುತ್ತದೆ.