ಲಖನೌ: ದೀಪಾವಳಿ ಹಬ್ಬದ ಪ್ರಯುಕ್ತ ಅಯೋಧ್ಯೆಯಲ್ಲಿರುವ ರಾಮ ಮಂದಿರ ದೇಗುಲಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಖನೌ: ದೀಪಾವಳಿ ಹಬ್ಬದ ಪ್ರಯುಕ್ತ ಅಯೋಧ್ಯೆಯಲ್ಲಿರುವ ರಾಮ ಮಂದಿರ ದೇಗುಲಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಹನುಮಾನ್ ಗಡಿ ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ವೇಳೆ ಆದಿತ್ಯನಾಥ್ ಅವರು ಶುಭಾಶಯಗಳನ್ನು ಕೋರಿದ್ದಾರೆ.
ಈ ಬಾರಿಯ ದೀಪಾವಳಿ ಹಬ್ಬವು ಐತಿಹಾಸಿಕ ಮತ್ತು ಅಭೂತಪೂರ್ವವಾಗಿದೆ. 500 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಬಾಲರಾಮ ತನ್ನ ನಿವಾಸದಲ್ಲಿ ಆಸೀನನಾಗಿದ್ದಾನೆ. ಅಯೋಧ್ಯೆ ಬಾಲರಾಮನ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಹೊಸ ದೇವಾಲಯದಲ್ಲಿ ಅಸಂಖ್ಯಾತ ದೀಪಗಳನ್ನು ಬೆಳಗಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿ ಎಕ್ಸ್ನಲ್ಲಿ ತಿಳಿಸಿದೆ.
ರಾಜ್ಯ ಸರ್ಕಾರವು 'ದೀಪೋತ್ಸವ' ಆಯೋಜಿಸುವ ಮೂಲಕ ಅಯೋಧ್ಯೆಯಲ್ಲಿ ದೀಪಾವಳಿಯನ್ನು ಆಚರಿಸುವ ಪ್ರಾಚೀನ ಮತ್ತು ವೈಭವದ ಸಂಪ್ರದಾಯವನ್ನು ಮರುಸ್ಥಾಪಿಸುತ್ತಿದೆ. ಇಡೀ ವಿಶ್ವ ಸಮುದಾಯಕ್ಕೆ ಅಯೋಧ್ಯೆಯ ವೈಭವವನ್ನು ಪರಿಚಯಿಸಲು ಕೆಲಸ ಮಾಡುತ್ತಿದೆ ಎಂದು ಬರೆದುಕೊಂಡಿದೆ.