ನೂಹ್: ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರೀತಿ ಮತ್ತು ದ್ವೇಷದ ನಡುವಿನ ಹೋರಾಟವಾಗಿದೆ ಎಂದು ಹೇಳಿದ್ದಾರೆ.

ಚುನಾವಣಾ ರ‍್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಿಜೆಪಿಯು ಜಾತಿ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ದ್ವೇಷ ಹರಡುತ್ತಿದೆ. ಕಾಂಗ್ರೆಸ್ ಪ್ರೀತಿಯನ್ನು ಪಸರಿಸಿದರೆ, ಬಿಜೆಪಿ ದ್ವೇಷವನ್ನು ಹರಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಆರ್‌ಎಸ್‌ಎಸ್ ಮತ್ತು ಬಿಜೆಪಿಯು ಯಾವುದೇ ರಾಜ್ಯಕ್ಕೆ ಹೋದರೂ ಅಲ್ಲಿನ ಧರ್ಮ, ಭಾಷೆ ಹಾಗೂ ಜಾತಿಯ ಆಧಾರದ ಮೇಲೆ ಜನರಲ್ಲಿ ದ್ವೇಷವನ್ನು ಬಿತ್ತಲು ಪ್ರಯತ್ನಿಸುತ್ತಿದೆ. ದ್ವೇಷವನ್ನು ಕೊನೆಗೊಳಿಸಬೇಕು. ದ್ವೇಷವು ಸಮಾಜದಲ್ಲಿ ಭಯ ಮತ್ತು ಅಶಾಂತಿಗೆ ಕಾರಣವಾಗುತ್ತದೆ. ಪ್ರೀತಿ ದೇಶದ ಸಮೃದ್ಧಿಗೆ ಹಾಗೂ ಶಾಂತಿ ನೆಲಸುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.
ಸಮಾಜದಲ್ಲಿ ದ್ವೇಷ ಹರಡಲು ನಾವು (ಕಾಂಗ್ರೆಸ್) ಅನುವು ಮಾಡಿಕೊಡುವುದಿಲ್ಲ. ಪ್ರೀತಿ, ಸಹೋದರತೆ ಮತ್ತು ಏಕತೆ ಗೆಲ್ಲುತ್ತದೆ ಎಂದರು.
ಸಂವಿಧಾನ ಬಡವರ, ರೈತರ ಹಾಗೂ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಿದೆ. ಆದರೆ ಸಂವಿಧಾನ ನಾಶಪಡಿಸಲು ಆರ್‌ಎಸ್‌ಎಸ್ ಮತ್ತು ಬಿಜೆಪಿ ಯತ್ನಿಸುತ್ತಿದೆ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 8ಕ್ಕೆ ಫಲಿತಾಂಶ ಹೊರಬೀಳಲಿದೆ.