ರಾಂಚಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ರಾಂಚಿಯಲ್ಲಿ ಇಂದು (ಶನಿವಾರ) ಭೇಟಿಯಾಗಿರುವ ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮಾತುಕತೆ ನಡೆಸಿದ್ದಾರೆ.
ರಾಂಚಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ರಾಂಚಿಯಲ್ಲಿ ಇಂದು (ಶನಿವಾರ) ಭೇಟಿಯಾಗಿರುವ ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಎಐಸಿಸಿ ಮಾಹಿತಿ ನೀಡಿದೆ.
ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆಯ ಹಿನ್ನೆಲೆಯಲ್ಲಿ ಈ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 81 ಸ್ಥಾನಗಳ ಪೈಕಿ ಕಾಂಗ್ರೆಸ್ ಹಾಗೂ ಜೆಎಂಎಂ ಮೈತ್ರಿ 70ರಲ್ಲಿ ಸ್ಪರ್ಧಿಸಲಿದೆ ಎಂದು ಹೇಮಂತ್ ಸೊರೇನ್ ಮಾಹಿತಿ ನೀಡಿದ್ದರು.
ಆರ್‌ಜೆಡಿ, ಎಡಪಕ್ಷ ಸೇರಿದ 'ಇಂಡಿಯಾ' ಮೈತ್ರಿಕೂಟವು ಉಳಿದ 11 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಅವರು ತಿಳಿಸಿದ್ದರು.
81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 13ರಂದು ಮೊದಲ ಹಂತ ಹಾಗೂ ನವೆಂಬರ್ 20ರಂದು ಎರಡನೇ ಹಂತದ ಮತದಾನ ನಡೆಯಲಿದೆ.
ಬಳಿಕ ನವೆಂಬರ್ 23ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.