HEALTH TIPS

J'khand polls: ರಾಜ್ಯದಲ್ಲಿದ್ದಾರೆ 900ಕ್ಕೂ ಹೆಚ್ಚು ಶತಾಯುಷಿ ಮತದಾರರು

 ರಾಂಚಿ: ನವೆಂಬರ್ 13ರಂದು ಜಾರ್ಖಂಡ್‌ನ 43 ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಮೊದಲ ಹಂತದ ಮತದಾನದಲ್ಲಿ 900ಕ್ಕೂ ಹೆಚ್ಚು ಶತಾಯುಷಿಗಳು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ 462 ಪುರುಷರು ಹಾಗೂ 533 ಮಹಿಳೆಯರು ಸೇರಿದಂತೆ 100 ವರ್ಷಕ್ಕಿಂತ ಮೇಲ್ಪಟ್ಟ ಒಟ್ಟು 995 ಮಂದಿ ಮತ ಚಲಾಯಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಒಟ್ಟು 2.60 ಕೋಟಿ ಮತದಾರರಿದ್ದಾರೆ. ಅವರಲ್ಲಿ 1.13 ಲಕ್ಷ ಮಂದಿ 85 ವರ್ಷಕ್ಕಿಂತ ಮೇಲ್ಪಟ್ಟವರು.

ಅಂಗವಿಕಲರು ಮತ್ತು ಹಿರಿಯ ನಾಗರಿಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾರ್ಖಂಡ್‌ನಲ್ಲಿ, ಎಲ್ಲಾ ಮತದಾನ ಕೇಂದ್ರಗಳೂ ನೆಲ ಮಹಡಿಯಲ್ಲಿವೆ. ಅಂಗವಿಕಲರು ಮತ್ತು ಹಿರಿಯ ನಾಗರಿಕರಿಗೆ ಗಾಲಿಕುರ್ಚಿಗಳನ್ನು ಒದಗಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ(ಇಸಿಐ) ಹೇಳಿದೆ.

ಇದಲ್ಲದೆ, ಅಂಗವಿಕಲ ಮತದಾರರಿಗೆ ಅಗತ್ಯ ಸೌಲಭ್ಯವನ್ನು ಒದಗಿಸಲು ಆಯೋಗವು ಆಯಾ ಮತಗಟ್ಟೆ ಅಧಿಕಾರಿಗಳಿಗೆ ನಿರ್ದೇಶಿಸಿದೆ. ಮತದಾನದ ದಿನದಂದು ಪ್ರತಿ ಮತಗಟ್ಟೆಯಲ್ಲಿ ಅವರಿಗೆ (ಅಂಗವಿಕಲ ಮತ್ತು ಹಿರಿಯ ನಾಗರಿಕರು) ಸೂಕ್ತ ಸಾರಿಗೆ ಸೌಲಭ್ಯವನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದೆ.

ರಾಜ್ಯದಲ್ಲಿ ನವೆಂಬರ್ 13 ಮತ್ತು ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ಮತ ಎಣಿಕೆ ಪ್ರಕಿಯೆ ನಡೆಯಲಿದೆ.

ಮತದಾರರ ವಿವರ:

11.84 ಲಕ್ಷ ಪ್ರಥಮ ಬಾರಿಗೆ ಮತ ಚಲಾಯಿಸುವವರು, 1.13 ಲಕ್ಷ ಅಂಗವಿಕಲರು, ತೃತೀಯಲಿಂಗಿ ಮತ್ತು 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಸೇರಿದಂತೆ ಒಟ್ಟು 2.60 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries