ಶ್ರೀನಗರ: ಬಾರಾಮುಲ್ಲಾದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರ: ಬಾರಾಮುಲ್ಲಾದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಗುಪ್ತಚರ ಮಾಹಿತಿಯ ಆಧಾರದ ಮೇಲೆ ಉಗ್ರರ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯ ಭಾಗವಾಗಿ ಉರಿ ಮತ್ತು ಬಾರಾಮುಲ್ಲಾ ಗಡಿ ಪ್ರದೇಶದಲ್ಲಿ ಭಾರತೀಯ ಸೇನೆ ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ' ಎಂದು ಚಿನಾರ್ ಕೋರ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.
ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಸೈನಿಕರು ಕೂಡ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಪೂಂಚ್ ಜಿಲ್ಲೆಯಲ್ಲಿ ನಡೆದಿರುವ ಗ್ರೆನೇಡ್ ದಾಳಿ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು, ಜಮ್ಮು-ಕಾಶ್ಮೀರ ಘಝ್ನವಿ ಪಡೆಗೆ (ಜೆಕೆಜಿಎಫ್) ಸೇರಿದ ಇಬ್ಬರು ಭಯೋತ್ಪಾದಕರನ್ನು ಶನಿವಾರ ಬಂಧಿಸಿದ್ದರು.
'ಶುಕ್ರವಾರ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಅಜೀಜ್ ಮತ್ತು ಹುಸೈನ್ ಎಂಬವರನ್ನು ಸೆರೆ ಹಿಡಿದಿವೆ. ಅವರ ಬಳಿಯಿದ್ದ 3 ಗ್ರೆನೇಡ್, ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ' ಎಂದು ಜಮ್ಮು ವಿಭಾಗದ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಆನಂದ್ ಜೈನ್ ಹೇಳಿದ್ದರು.