ಪುಣೆ: ಹರಿಯಾಣ ಚುನಾವಣೆಯ ಫಲಿತಾಂಶ ಮುಂದಿನ ತಿಂಗಳು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಪುಣೆ: ಹರಿಯಾಣ ಚುನಾವಣೆಯ ಫಲಿತಾಂಶ ಮುಂದಿನ ತಿಂಗಳು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಕೇಂದ್ರಾಡಳಿತ ಪ್ರದೇಶವು ಜಾಗತಿಕವಾಗಿ ಹೆಚ್ಚು ಗಮನ ಸೆಳೆಯುತ್ತಿರುವುದರಿಂದ ಜಮ್ಮು ಮತ್ತು ಕಾಶ್ಮೀರ ಚುನಾವಣೆಯ ಫಲಿತಾಂಶ ದೇಶದ ದೃಷ್ಟಿಕೋನದಿಂದ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ಸತಾರಾ ಜಿಲ್ಲೆಯ ಕರದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನೂತನ ನ್ಯಾಯ ದೇವತೆಯ ಪ್ರತಿಮೆಯನ್ನು ಅನಾವರಣಗೊಳಿಸುವುದರೊಂದಿಗೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ ಅವರು ಹೊಸ ದಿಕ್ಕನ್ನು ತೋರಿಸಿದ್ದಾರೆ. ಏಕೆಂದರೆ ಈ ಹಿಂದೆ ಯಾರೂ ಈ ಬದಲಾವಣೆಗಳನ್ನು ಮಾಡಲು ಯೋಚಿಸಿರಲಿಲ್ಲ' ಎಂದು ಹೇಳಿದರು.
'ಹರಿಯಾಣ ಚುನಾವಣೆಯ ಸೋಲಿನ ಕಾರಣಗಳ ಕುರಿತು ನಾವು ಅಧ್ಯಯನ ಮಾಡುತ್ತಿದ್ದೇವೆ. ಹರಿಯಾಣದ ಫಲಿತಾಂಶಗಳು ರಾಜ್ಯದ ಚುನಾವಣೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಜಮ್ಮು ಮತ್ತು ಕಾಶ್ಮೀರದ ಫಲಿತಾಂಶ ದೇಶಕ್ಕೆ ಹೆಚ್ಚು ಮುಖ್ಯವಾಗಿದೆ' ಎಂದು ಅವರು ತಿಳಿಸಿದರು.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.
ಅಕ್ಟೋಬರ್ 5ರಂದು ನಡೆದ ಹರಿಯಾಣ ಚುನಾವಣೆಯಲ್ಲಿ, 90 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಿತು. ಕಾಂಗ್ರೆಸ್ 37 ಸ್ಥಾನಗಳನ್ನು ಗೆದ್ದಿತ್ತು.