ಮುಂಬೈ: ಮತದಾರರನ್ನು ತಪ್ಪು ದಾರಿಗೆ ಎಳೆಯುವ ಹಾಗೂ ಸುಳ್ಳು ಸುದ್ದಿಗಳನ್ನು ಹಂಚುತ್ತಿರುವ ಆರೋಪದ ಅಡಿ 1,752 ಪೋಸ್ಟ್‌ಗಳನ್ನು ತಕ್ಷಣ ಅಳಿಸಿ ಹಾಕುವಂತೆ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗ ಸಾಮಾಜಿಕ ಜಾಲತಾಣ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನೋಟಿಸ್ ಪರಿಗಣಿಸಿರುವ ಕಂಪನಿಗಳು ಸದ್ಯ 300ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಅಳಿಸಿ ಹಾಕಿವೆ ಎಂದು ಆಯೋಗ ತಿಳಿಸಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆ 73 (3) ಅಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಯೋಗ ಹೇಳಿದ್ದು, ಮತದಾರರನ್ನು ತಪ್ಪು ದಾರಿಗೆ ಎಳೆಯುವ ಹಾಗೂ ಸುಳ್ಳು ಸುದ್ದಿಗಳನ್ನು ಹಂಚುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಯೋಗ ಎಚ್ಚರಿಸಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಡಿ ಇದುವರೆಗೆ 414 ಪ್ರಕರಣಗಳು ದಾಖಲಾಗಿದ್ದು, ಠಾಣೆ ಜಿಲ್ಲೆಯಲ್ಲಿ ಅತಿ ಹೆಚ್ಚು ವರದಿಯಾಗಿವೆ. ₹10.06 ಕೋಟಿ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.