ಕಾನೊ : ಉತ್ತರ ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟಗೊಂಡು ಕನಿಷ್ಠ 94 ಮಂದಿ ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಕಾನೊ : ಉತ್ತರ ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟಗೊಂಡು ಕನಿಷ್ಠ 94 ಮಂದಿ ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಜಿಗಾವಾ ರಾಜ್ಯದ ಟೌರಾ ಸರ್ಕಾರಿ ಪ್ರದೇಶದ ಮಜಿಯಾ ಎಂಬ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸ್ಫೋಟ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಆತಂಕ ಕಾಡುತ್ತಿದೆ.
ಟ್ರಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ವೇಳೆ ಟ್ಯಾಂಕರ್ ಪಲ್ಟಿಯಾಗಿದೆ. ಅಪಘಾತದ ನಂತರ ಚೆಲ್ಲಿದ ಇಂಧನ ಸಂಗ್ರಹಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದು ಸಾವಿನ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಸ್ತೆಗಳ ಕಳಪೆ ನಿರ್ವಹಣೆಯಿಂದಾಗಿ ಆಫ್ರಿಕಾದ ಅತ್ಯಂತ ಜನನಿಬಿಡ ರಾಷ್ಟ್ರವಾದ ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ದುರಂತಗಳು ಸರ್ವೇ ಸಾಮಾನ್ಯವಾಗಿದೆ.