ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ (PMMY) ನೀಡುವ ಸಾಲದ ಮಿತಿಯನ್ನು ₹ 20 ಲಕ್ಷಕ್ಕೆ ಹೆಚ್ಚಿಸಿದೆ. ದೇಶದಾದ್ಯಂತ ಉದ್ಯಮಶೀಲತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಪಿಟಿಐ ವರದಿ ಮಾಡಿದೆ.

'ಕಾರ್ಪೊರೇಟ್ ಅಲ್ಲದ ಕೃಷಿಯೇತರ ಸಣ್ಣ ಮತ್ತು ಅತಿಸಣ್ಣ ಉದ್ಯಮಿಗಳಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ.
ಜುಲೈನಲ್ಲಿ ಮಂಡನೆಯಾಗಿದ್ದ 2024-25ನೇ ಸಾಲಿನ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸಾಲದ ಮಿತಿ ಏರಿಕೆ ಬಗ್ಗೆ ಪ್ರಸ್ತಾಪಿಸಿದ್ದರು. ತರುಣ್ ವಿಭಾಗದಲ್ಲಿ ₹10 ಲಕ್ಷ ಸಾಲ ಪಡೆದಿದ್ದು, ಸಕಾಲದಲ್ಲಿ ಮರುಪಾವತಿ ಮಾಡಿದವರಿಗಷ್ಟೇ ಈ ಸೌಲಭ್ಯ ಸಿಗಲಿದೆ.
'ತರುಣ್ ಪ್ಲಸ್ ವಿಭಾಗದಲ್ಲಿ ₹10 ಲಕ್ಷದಿಂದ ₹20 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ' ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
2015ರ ಏಪ್ರಿಲ್ 8ರಂದು ಪಿಎಂಎಂವೈ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಸರ್ಕಾರಿ ಬ್ಯಾಂಕ್‌ಗಳು, ಬ್ಯಾಂಕೇತರ ಹಣಕಾಸು ಕಂಪನಿಗಳು, ಕಿರು ಹಣಕಾಸು ಸಂಸ್ಥೆಗಳ ಮೂಲಕ ಅರ್ಹರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತದೆ.
ಯಾವುದೇ, ಆಧಾರ ಇಲ್ಲದೆ ಸಾಲ ಸೌಲಭ್ಯ ಸಿಗಲಿದೆ. ಶಿಶು (₹50 ಸಾವಿರದವರೆಗೆ), ಕಿಶೋರ್ (₹50 ಸಾವಿರದಿಂದ ₹5 ಲಕ್ಷ) ಹಾಗೂ ತರುಣ್ (₹10 ಲಕ್ಷ) ವಿಭಾಗದಲ್ಲಿ ಸಾಲ ನೀಡಲಾಗುತ್ತದೆ.