ತಿರುವನಂತಪುರ: ಕಾಸರಗೋಡು ಜಿಲ್ಲೆಯ ನೀಲೇಶ್ವರ ಬಳಿಯ ದೇವಸ್ಥಾನದ ಉತ್ಸವದ ವೇಳೆ ಸಂಭವಿಸಿದ ಪಟಾಕಿ ಅವಘಡಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ಕೇರಳ ಸರ್ಕಾರ ಮಂಗಳವಾರ ಆದೇಶಿಸಿದೆ.
ನೀಲೇಶ್ವರ :ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಅವಘಡ: SIT ತನಿಖೆಗೆ ಆದೇಶ
0
October 30, 2024
Tags
ತಿರುವನಂತಪುರ: ಕಾಸರಗೋಡು ಜಿಲ್ಲೆಯ ನೀಲೇಶ್ವರ ಬಳಿಯ ದೇವಸ್ಥಾನದ ಉತ್ಸವದ ವೇಳೆ ಸಂಭವಿಸಿದ ಪಟಾಕಿ ಅವಘಡಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ಕೇರಳ ಸರ್ಕಾರ ಮಂಗಳವಾರ ಆದೇಶಿಸಿದೆ.
ಉತ್ಸವಕ್ಕಾಗಿ ತರಿಸಿದ್ದ ಪಟಾಕಿಯ ದಾಸ್ತಾನಿಗೆ ಸೋಮವಾರ ತಡರಾತ್ರಿ ಬೆಂಕಿ ಬಿದ್ದ ಪರಿಣಾಮ ಅದು ಸ್ಫೋಟಗೊಂಡು 154 ಜನ ಗಾಯಗೊಂಡು, ಎಂಟು ಜನ ಗಂಭೀರವಾಗಿ ಗಾಯಗೊಂಡಿದ್ದರು.
ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಇದರ ಜತೆಯಲ್ಲೇ ಸಹಾಯಕ ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರೂ ಪ್ರತ್ಯೇಕ ತನಿಖೆ ನಡೆಸಿ, ವರದಿ ಸಲ್ಲಿಸಲು ನಿರ್ದೇಶಿಸಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.
ನೀಲೇಶ್ವರಂ ಬಳಿಯ ಅಂಜೂತ್ತಾನಬಲಂ ವೀರರ್ಕಾವು ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಸ್ಪೋಟಕ ವಸ್ತುವಿನ ಕಾಯ್ದೆಯಡಿ ಪಟಾಕಿ ದುರಂತ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನುಮತಿ ಇಲ್ಲದೆ ಪಟಾಕಿಗಳನ್ನು ಸಂಗ್ರಹಿಸಲಾಗಿದ್ದು, ಸುರಕ್ಷತಾ ನಿಯಮಗಳನ್ನು ಪಾಲಿಸಿಲ್ಲ ಎಂದು ಜಿಲ್ಲಾಧಿಕಾರಿ ಇನ್ಬಶೇಖರ್ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.